ಸಮುದಾಯ ಭವನ ನಿರ್ಮಾಣಕ್ಕೆ 75 ಕೋಟಿ ರೂ. ಅನುದಾನ

ಬೆಂಗಳೂರು  : ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಮುದಾಯ ಭವನಗಳನ್ನು ನಿರ್ಮಿಸುವ ಸಲುವಾಗಿ ಸರ್ಕಾರವು 75 ಕೋಟಿ ರೂ. ಅನುದಾನವನ್ನು ಕಾಯ್ದಿರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ತಿಳಿಸಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಎನ್.ಎಸ್. ಬೋಸ್‍ರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಇಲಾಖೆವತಿಯಿಂದ ರಾಯಚೂರು ಜಿಲ್ಲೆಯ ರಾಯಚೂರು ತಾಲ್ಲೂಕಿನಲ್ಲಿ ಮೂರು ಹಾಗೂ ಮಾನ್ವಿ ತಾಲ್ಲೂಕಿನಲ್ಲಿ ಒಂದು ಮಹಿಳಾ ಸಮುದಾಯ ಭವನಗಳಿವೆ ಎಂದು ತಿಳಿಸಿದರು.
2014-15 ನೇ ಸಾಲಿಗೆ ಸಮುದಾಯ ಭವನ ನಿರ್ಮಾಣಕ್ಕಾಗಿ ಸಲ್ಲಿಸಲಾಗಿರುವ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಸ್ತಾವನೆಯ ಜೊತೆಯಲ್ಲಿಯೇ ನಿವೇಶನವನ್ನು ಗುರುತಿಸಿ ನೀಡಿದವರಿಗೆ ಮೊದಲ ಆದ್ಯತೆಯ ಮೇಲೆ ಹಣ ಬಿಡುಗಡೆ ಮಾಡಲಾಗುವುದೆಂದು ಸಚಿವರು ಭರವಸೆ ನೀಡಿದರು.

Leave a Reply