ಹಳಿ ತಪ್ಪಿದ ರೈಲು : ಸಾವಿನ ಸಂಖ್ಯೆ ಎಂಟನ್ನೂ ಮೀರುವ ಸಾಧ್ಯತೆ

ಬೆಂಗಳೂರು,   :   ಬೆಂಗಳೂರು-ಎರ್ನಾಕುಲಂ ರೈಲಿನ 8 ಬೋಗಿಗಳು ಹಳಿ ತಪ್ಪಿವೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿ, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಆನೇಕಲ್ ರೈಲು ನಿಲ್ದಾಣದಿಂದ 3 ಕಿ.ಮೀ. ದೂರದ ಬಿದರಗೆರೆ ಬಳಿ ಈ ಅಪಾಘಾತ ಸಂಭವಿಸಿದೆ.  

           ಬೆಂಗಳೂರು-ಎರ್ನಾಕುಲಂ ರೈಲು  ದುರಂತದ ಬಗ್ಗೆ ಮಾಹಿತಿ ನೀಡಲು ಬೆಂಗಳೂರು ರೈಲು ನಿಲ್ದಾಣದಲ್ಲಿ ಸಹಾಯವಾಣಿ ಸಂಖ್ಯೆಗಳು 080 – 22371166, 22156553, 22156554. 9731666751,  080-22371166  ಜಖಂಗೊಂಡಿರುವ ಬೋಗಿಗಳನ್ನು ಗ್ಯಾಸ್ ಕಟರ್ ಮೂಲಕ ಕತ್ತರಿಸಲಾಗುತ್ತಿದ್ದು, ನಂತರ ಒಳಗೆ ಸಿಲುಕಿರುವವರನ್ನು ರಕ್ಷಿಸಲಾಗುತ್ತದೆ. ರೈಲು ಅಪಘಾತದಲ್ಲಿ ಮಗು ಸೇರಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.  ಸ್ಥಳಕ್ಕೆ ಆಂಬ್ಯುಲೆನ್ಸ್ ಜೊತೆ ತೆರಳುವಂತೆ ಬೆಂಗಳೂರು ಗ್ರಾಮಾಂತರ ಡಿಎಚ್‌ಓಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ. ಬೋಗಿಯಲ್ಲಿ ಹಲವು ಪ್ರಯಾಣಿಕರು ಸಿಲುಕಿದ್ದಾರೆ.ಹಳಿಯಲ್ಲಿನ ತಾಂತ್ರಿಕ ದೋಷದಿಂದಾಗಿ ಅಪಘಾತ ನಡೆದಿದೆ  ಎನ್ನಲಾಗುತ್ತಿದೆ. ರೈಲಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು ಸ್ಥಳೀಯ ಮತ್ತು ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಅಪಘಾತದಿಂದಾಗಿ ಬೈಯಪ್ಪನಹಳ್ಳಿ-ಬೆಂಗಳೂರು ನಡುವಿನ ರೈಲು ಸಂಚಾರ ಸ್ಥಗಿತಗೊಂಡಿದೆ. 2 ಬೋಗಿಗಳು ಅಪಘಾತದಲ್ಲಿ ಸಂಪೂರ್ಣವಾಗಿ ಜಖಂಗೊಂಡಿದೆ. 
Please follow and like us:
error