ವಿಜಯನಗರ ಶ್ರೀ ಕೃಷ್ಣದೇವರಾಯ ವಿ.ವಿ. ಲಾಂಛನ ಸಮಿತಿ

ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಲಾಂಛನ ನಿರ್ಧಾರಕ್ಕಾಗಿ ವಿಶ್ವವಿದ್ಯಾಲಯದ ಕುಲಪತಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ವಿಧಾನಪರಿಷತ್ ಸದಸ್ಯ ಎಂ. ತಿಪ್ಪಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಳ್ಳಾರಿಯ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ, ಬಳ್ಳಾರಿಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಿಷ್ಠಿ ರುದ್ರಪ್ಪ, ಧಾರವಾಡದ ಕರ್ನಾಟಕ ಕಲಾ ಕಾಲೇಜಿನ ಚಿತ್ರಕಲಾವಿದ ಮಾರುತಿ, ಮುಖ್ಯಸ್ಥರು, ಹಂಪಿ ಕನ್ನಡ ವಿ.ವಿ. ಚರಿತ್ರೆ ಅಧ್ಯಯನ ವಿಭಾಗ, ಮುಖ್ಯಸ್ಥರು ಹಂಪಿ ಕನ್ನಡ ವಿ.ವಿ. ಶಿಲ್ಪಕಲಾ ಅಧ್ಯಯನ ವಿಭಾಗ, ಬಳ್ಳಾರಿಯ ಕಲಾವಿದ ಜಿ. ಮಂಜುನಾಥ, ಕನ್ನಡ ಸಾಹಿತ್ಯ ಪರಿಷತ್ ಕೊಪ್ಪಳ ಜಿಲ್ಲಾಧ್ಯಕ್ಷ ಶೇಖರಗೌಡ ಮಾಲಿಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳದ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ, ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಬಸವರಾಜ ಆಕಳವಾಡಿ, ಬಳ್ಳಾರಿಯ ನಿವೃತ್ತ ಉಪನ್ಯಾಸಕ ಎಂ. ಗೋವಿಂಧಭಟ್, ನಿವೃತ್ತ ಪ್ರಾಚಾರ್ಯ ಹರಿಕುಮಾರ್ ಅವರು ಸಮಿತಿ ಸದಸ್ಯರುಗಳಾಗಿ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Leave a Reply