ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಜ. ೧೧ ಕ್ಕೆ ಮುಂದೂಡಿಕೆ.

ಕೊಪ್ಪಳ ಜ. ೦೭ (ಕ ವಾ)  ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಜ. ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.ಈ ಮೊದಲು ಸಭೆಯನ್ನು ಜ. ೦೮ ರಂದು ನಡೆಸಲು ನಿಗದಿಪಡಿಸಲಾಗಿತ್ತು.  ಇದೀಗ ಅನಿವಾರ್ಯ ಕಾರಣಗಳಿಂದ ಮುಂದೂಡಿ ಜ. ೧೧ ಕ್ಕೆ ಸಭೆ ನಡೆಸಲು ನಿರ್ಧರಿಸಲಾಗಿದೆ.  ಸಂಸದ ಕರಡಿ ಸಂಗಣ್ಣ ಅವರು ಸಭೆಯ ಅಧ್ಯಕ್ಷತೆ ವಹಿಸುವರು.  ಸಭೆಯಲ್ಲಿ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ತಿಳಿಸಿದ್ದಾರೆ.ನವೋದಯ ಪ್ರವೇಶ ಪರೀಕ್ಷಾ ಕೇಂದ್ರ ಬದಲುಕೊಪ್ಪಳ ಜ. ೦೭ (ಕರ್ನಾಟಕ ವಾರ್ತೆ): ಇದೇ ಜ. ೦೯ ರಂದು ಜರುಗಲಿರುವ ನವೋದಯ ವಿದ್ಯಾಲಯದ ಆಯ್ಕೆ ಪರೀಕ್ಷೆಯನ್ನು ಯಲಬುರ್ಗಾದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಬರೆಯಬೇಕಿದ್ದ ವಿದ್ಯಾರ್ಥಿಗಳು, ಯಲಬುರ್ಗಾದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಸೂಚನೆ ನೀಡಿದ್ದಾರೆ.ಪ್ರವೇಶ ಪತ್ರದಲ್ಲಿ ಪರೀಕ್ಷಾ ಕೇಂದ್ರ ಯಲಬುರ್ಗಾದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು ಎಂದು ನಮೂದಿಸಲಾಗಿದ್ದು, ಇಲ್ಲಿ ಪರೀಕ್ಷೆ ಬರೆಯಬೇಕಿರುವ ಅಭ್ಯರ್ಥಿಗಳು ಯಲಬುರ್ಗಾದ ಸರ್ಕಾರಿ ಪ್ರೌಢಶಾಲೆಗೆ ಹಾಜರಾಗಿ ಪರೀಕ್ಷೆ ಬರೆಯಬೇಕು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
Please follow and like us:
error