ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ : ಆರೋಪಿಗೆ ೮ ವರ್ಷ ಕಾರಾಗೃಹ ಶಿಕ್ಷೆ

ಕೊಪ್ಪಳ ಜು. ೩ : ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಆಕೆಯ ಆತ್ಮಹತ್ಯೆಗೆ ಕಾರಣನಾದ ಹುಲಿಹೈದರ ಗ್ರಾಮದ ಮಾರುತಿ ತಂದೆ ಭೂಪತಿ ಯಲಮಗೇರಿ ಎಂಬಾತನಿಗೆ ಕೊಪ್ಪಳ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಸಿ.ಎಸ್. ಮಾಳಗಿ ಅವರು ೮ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ೮೦೦೦ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಹುಲಿಹೈದರ ಗ್ರಾಮದ ಮಾರುತಿ ತಂದೆ ಭೂಪತಿ ಯಲಮಗೇರಿ ಎಂಬಾತ ಅದೇ ಗ್ರಾಮದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡುವುದು, ಚುಡಾಯಿಸುವುದು ಮಾಡುತ್ತಿದ್ದ. ಕಳೆದ ೨೦೦೯ ರ ಜನವರಿಯಲ್ಲಿ ಈತ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಅಪಹರಣ ಮಾಡಿಕೊಂಡು ಹೋಗಿದ್ದರಿಂದ, ಅಪಮಾನಪಟ್ಟುಕೊಂಡ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಪ್ರಕರಣದ ತನಿಖೆಯನ್ನು ಪಿ.ಎಸ್.ಐ ಆಗಿದ್ದ ಟಿ.ಆರ್. ರಾಘವೇಂದ್ರ ಅವರು ಕೈಗೊಂಡು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕೊಪ್ಪಳ ಜಿಲ್ಲಾ ಮತ್ತು ಸತ್ಯ ನ್ಯಾಯಾಧೀಶ ಸಿ.ಎಸ್. ಮಾಳಗಿ ಅವರು ಆರೋಪಿಗೆ ೮ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಐ.ಬಿ. ಚೌಧರಿ ಅವರು ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
Please follow and like us:
error