ಉಪಚುನಾವಣೆ : ವೆಚ್ಚ ನಿರ್ವಹಣೆಗೆ ಪ್ರತ್ಯೇಕ ಬ್ಯಾಂಕ್ ಖಾತೆ ತೆರೆಯಲು ಸೂಚನೆ

ಕೊಪ್ಪಳ ಸೆ. (ಕ.ವಾ): ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ವೆಚ್ಚದ ನಿರ್ವಹಣೆಗಾಗಿ ಅಭ್ಯರ್ಥಿಗಳು ರಾಷ್ಟ್ರೀಯ ಬ್ಯಾಂಕಿನಲ್ಲಿ ಪ್ರತ್ಯೇಕ ಖಾತೆ ತೆರೆದು, ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬ್ಯಾಂಕ್ ಖಾತೆಯ ವಿವರ ನೀಡಬೇಕು ಎಂದು ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಅವರು ಸೂಚನೆ ನೀಡಿದ್ದಾರೆ.
  ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಪೂರ್ವದಲ್ಲಿ ಚುನಾವಣಾ ವೆಚ್ಚದ ನಿರ್ವಹಣೆಗಾಗಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪ್ರತ್ಯೇಕ ಖಾತೆ ತೆರೆದು, ಬ್ಯಾಂಕ್ ಖಾತೆ ವಿವರವನ್ನು ನಾಮಪತ್ರ ಸಲ್ಲಿಸುವಾಗ ಮಾಹಿತಿ ನೀಡಬೇಕು.  ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ಖರ್ಚಿನ ವಿವರಗಳನ್ನು ಇದೇ ಬ್ಯಾಂಕ್ ಖಾತೆ ಮೂಲಕ ನಿರ್ವಹಣೆಯಾಗುವಂತೆ ನೋಡಿಕೊಳ್ಳಬೇಕು.   ಅಲ್ಲದೆ ಕಣದಲ್ಲಿ ಉಳಿಯುವ ಸ್ಪರ್ಧಾಳುಗಳು ತಮ್ಮ ಚುನಾವಣಾ ವೆಚ್ಚದ ಲೆಕ್ಕ ಪತ್ರಗಳನ್ನು ಚುನಾವಣಾ ವೀಕ್ಷಕರು (ವೆಚ್ಚ) ಮತ್ತು ಚುನಾವಣಾಧಿಕಾರಿಗಳಿಗೆ ಆದ್ಯತೆಯ ಮೇರೆಗೆ ಸೆ. ೧೫ ಅಥವಾ ೧೬ ಮತ್ತು ಸೆ. ೨೦ ಹಾಗೂ ೨೪ ರಂದು ಪರಿಶೀಲನೆಗಾಗಿ ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please follow and like us:
error