ಜು. ೭ ರಂದು ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ

ಕೊಪ್ಪಳ ಜು. : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕೊಪ್ಪಳ ವಿಭಾಗ, ಜಿಲ್ಲಾ ಮಲೇರಿಯಾ ಕಚೇರಿ ಹಾಗೂ ಮುದೇನೂರು ಗ್ರಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಜುಲೈ ೭ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಕುಷ್ಟಗಿ ತಾಲೂಕು ಮುದೇನೂರು ಗ್ರಾಮದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ನೆರವೇರಿಸುವರು. ಶ್ರೀ ಶಶಿಧರ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನಿಧ್ಯ ವಹಿಸಲಿದ್ದು, ಶ್ರೀ ಷಟಸ್ಥಲ ಬ್ರಹ್ಮ ಪೂಜ್ಯ ಅಭಿನವ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷ ಎಸ್. ಮಲ್ಲಿಕಾರ್ಜುನ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಸದಸ್ಯ ವಿಜಯಕುಮಾರ ಮೇಲಿನಮನಿ, ತಾಲೂಕಾ ಪಂಚಾಯತಿ ಸದಸ್ಯೆ ಶಾಂತಮ್ಮ ಮೇಟಿ, ಗ್ರಾ.ಪಂ. ಉಪಾಧ್ಯಕ್ಷ ಪರಸಪ್ಪ ಚೌಡ್ಕಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಸೇರಿದಂತೆ ಮುದೇನೂರು ಗ್ರಾ.ಪಂ. ಸದಸ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಪ್ರಭಾರಿ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಎಂ.ಎಂ. ಕಟ್ಟಿಮನಿ ಹಾಗೂ ಸಹಾಯಕ ಕೀಟ ಶಾಸ್ತ್ರಜ್ಞೆ ಅನ್ನಪೂರ್ಣ ಶೆಟ್ಟರ ಅವರು ಮಲೇರಿಯಾ ರೋಗ ಹರಡುವಿಕೆ, ನಿಯಂತ್ರಣ ಹಾಗೂ ಮುಂಜಾಗ್ರತೆ ಕುರಿತಂತೆ ಉಪನ್ಯಾಸ ನೀಡುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಸಿ.ಬಿ. ಬಸವರಾಜ್ ಅವರು ತಿಳಿಸಿದ್ದಾರೆ.

Please follow and like us:
error