ಸರಕಾರಿ ಕಾಲೇಜ್ ನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ

ಕೊಪ್ಪಳ : ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪ್ರಾಚಾರ್ಯ ರಾಘವೇಂದ್ರಾಚಾರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಿರಾಜ್ ಬಿಸರಳ್ಳಿ, ಶಿ.ಕಾ.ಬಡಿಗೇರ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕವಿ ಶಿವಪ್ರಸಾದ ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತ ಕೋರಿದರು. ಕವಿಗೋಷ್ಠಿಯಲ್ಲಿ 20 ಜನ ಯುವ ಕವಿಗಳು, ಕವಿಯತ್ರಿಯರು ಭಾಗವಹಿಸಿದ್ದರು. ಅದರಲ್ಲಿ ನಾಲ್ವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳನ್ನುದ್ದೇಶಿಸಿ ಸಿರಾಜ್ ಬಿಸರಳ್ಳಿ ಮತ್ತು ಶಿ.ಕಾ.ಬಡಿಗೇರ ಮಾತನಾಡಿದರು. ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ಭಾವಿಕಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply