You are here
Home > Koppal News > ನ. ೭ ರಂದು ಸಚಿವ ಲಕ್ಷ್ಮಣ ಸವದಿ ಅವರಿಂದ ಪ್ರೌಢಶಾಲೆ ಕೊಠಡಿಗಳ ಉದ್ಘಾಟನೆ

ನ. ೭ ರಂದು ಸಚಿವ ಲಕ್ಷ್ಮಣ ಸವದಿ ಅವರಿಂದ ಪ್ರೌಢಶಾಲೆ ಕೊಠಡಿಗಳ ಉದ್ಘಾಟನೆ

ಕೊಪ್ಪಳ ನ. ಜಿಲ್ಲಾ ಪಂಚಾಯತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಹೊರತಟ್ನಾಳ ಗ್ರಾಮದಲ್ಲಿ ನಿರ್ಮಿಸಲಾಗಿರುವ ನೂತನ ಸರ್ಕಾರಿ ಪ್ರೌಢಶಾಲೆ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನ. ೭ ರಂದು ಮಧ್ಯಾಹ್ನ ೨-೩೦ ಗಂಟೆಗೆ ನೆರವೇರಲಿದೆ.
  ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ನೂತನ ಸರ್ಕಾರಿ ಪ್ರೌಢಶಾಲೆ ಕೊಠಡಿಗಳ ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ್ ವಲ್ಲ್ಯಾಪುರ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಸಂಸದ ಶಿವರಾಮಗೌಡ, ಶಾಸಕರುಗಳಾದ ಶಶಿಲ್ ನಮೋಶಿ, ಹಾಲಪ್ಪ ಆಚಾರ್, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಡಾ. ಸೀತಾ ಹಲಗೇರಿ, ಜಿ.ಪಂ. ಸದಸ್ಯೆ ಭಾಗೀರಥಿ ಪಾಟೀಲ್, ತಾಲೂಕಾ ಪಂಚಾಯತ್ ಅಧ್ಯಕ್ಷ ಅಮರೇಶ ಉಪಲಾಪುರ, ತಾ.ಪಂ. ಸದಸ್ಯ ದೇವಪ್ಪ ಗುಡ್ಲಾನೂರ, ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಮ್ಮ ಹಳ್ಳೆಪ್ಪ, ಸದಸ್ಯರುಗಳಾದ ಹನುಮಂತಪ್ಪ ಕಿಟಗೇರಿ, ಯಲ್ಲಮ್ಮ ನಾಯಕ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಮುಂತಾದವರು ಭಾಗವಹಿಸುವರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಪೂಜಾರ್ ಅವರು ತಿಳಿಸಿದ್ದಾರೆ. 

Leave a Reply

Top