ಎಸ್‌ಎಸ್‌ಎಲ್‌ಸಿ ಪರೀಕ್ಷೆ : ೭೮೫ ವಿದ್ಯಾರ್ಥಿಗಳು ಗೈರು

ಕೊಪ್ಪಳ ಏ.   : ಕೊಪ್ಪಳ ಜಿಲ್ಲೆಯಲ್ಲಿ ಬುಧವಾರದಂದು ಜರುಗಿದ ಎಸ್‌ಎಸ್‌ಎಲ್‌ಸಿ ವಿಜ್ಞಾನ ವಿಷಯದ ಪರೀಕ್ಷೆಗೆ ೧೬೮೫೩ ವಿದ್ಯಾರ್ಥಿಗಳು ಹಾಜರಾಗಿದ್ದು, ೭೮೫ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
  ಜಿಲ್ಲೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿಜ್ಞಾನ ವಿಷಯದ ಪರೀಕ್ಷೆಗೆ ೧೭೧೮೮ ರೆಗ್ಯುಲರ್ ಹಾಗೂ ೪೫೦ ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ ೧೬೪೫೫ ರೆಗ್ಯುಲರ್ ಹಾಗೂ ೩೯೮ ಪುನರಾವರ್ತಿತ ಅಭ್ಯರ್ಥಿಗಳು ಹಾಜರಾಗಿದ್ದಾರೆ.  ೭೩೩ ರೆಗ್ಯುಲರ್ ಹಾಗೂ ೫೨ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು ೭೮೫ ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.  ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್ ಅವರು  ತಿಳಿಸಿದ್ದಾರೆ.

Leave a Reply