ಡಿ. ೨ ರಿಂದ ಜಿಲ್ಲಾ ಮಟ್ಟದ ಪಿ.ಎಂ.ಇ.ಜಿ.ಪಿ. ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

 : ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಇವರಿಂದ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವು   ಡಿ.೨ ರಿಂದ ಡಿ. ೭ರ ವರೆಗೆ ನಗರದ ಶಾದಿಮಹಲ್‌ನಲ್ಲಿ ನಡೆಯಲಿದೆ.
ಡಿ. ೨ ರಂದು ಬೆಳಿಗ್ಗೆ ೧೧ ಗಂಟೆಗೆ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಜಿ. ಪಂ. ಅಧ್ಯಕ್ಷ ಟಿ. ಜನಾರ್ಧನ ಹುಲಿಗಿ ಅವರು ಉದ್ಘಾಟಿಸುವರು. ಸಮಾರಂಭದ ಅಧ್ಯಕ್ಷತಯನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ವಹಿಸುವರು. ತಾ. ಪಂ ಅಧ್ಯಕ್ಷ ಮುದೇಗೌಡ ನಾಗನಗೌಡ, ನಗರಸಭೆ ಅಧ್ಯಕ್ಷೆ ಶ್ರೀಮತಿ ಲತಾ ವೀರಣ್ಣ ಸಂಡೂರು, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀಮತಿ ರಶ್ಮೀ ವಿ. ಮಹೇಶ್, ಜಿಲ್ಲಾಧಿಕಾರಿ ಕೆ. ಪಿ. ಮೋಹನರಾಜ್, ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಡಿ. ಉದಪುಡಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಂಜುನಾಥ ಅಣ್ಣೀಗೇರಿ ಹಾಗೂ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ರವೀಂದ್ರ ಡಾಣಾಕ್ಷ ಅವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಖಾದಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಜಿಲ್ಲೆಯ ಜನತೆ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಎನ್. ಜಿ. ಹುನಗುಂದ  ಕೋರಿದ್ದಾರೆ.

Leave a Reply