You are here
Home > Koppal News > ಕಲ್ಯಾಣ ಕರ್ನಾಟಕ ಸಾಧಕ ಶಿಕ್ಷಕ ಪ್ರಶಸ್ತಿಗೆ ಆಯ್ಕೆ: ಹರ್ಷ ಅಭಿನಂದನೆ

ಕಲ್ಯಾಣ ಕರ್ನಾಟಕ ಸಾಧಕ ಶಿಕ್ಷಕ ಪ್ರಶಸ್ತಿಗೆ ಆಯ್ಕೆ: ಹರ್ಷ ಅಭಿನಂದನೆ

 ಯಾದಗಿರಿ ಜಿಲ್ಲೆಯ ಗುರುಮಠಕಲ್‌ನ ಸಿರಿಗನ್ನಡ ಪ್ರತಿಷ್ಠಾನ ಕೇಂದ್ರ ಸಂಘ ನೀಡಲಾಗುವ ೨೦೧೩-೧೪ನೇ ಸಾಲೀನ ಕಲ್ಯಾಣ ಕರ್ನಾಟಕ ಸಾಧಕ ಶಿಕ್ಷಕ ಪ್ರಶಸ್ತಿಗೆ ನಗರದ ಸಿ.ಪಿ.ಎಸ್.ಶಾಲೆಯ ಶಿಕ್ಷಕರು ಹಾಗೂ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಬೀರಪ್ಪ ಅಂಡಗಿ ಚಿಲವಾಡಗಿಯವರು ಆಯ್ಕೆಯಾಗಿದ್ದಾರೆ.ಪ್ರಶಸ್ತಿಯನ್ನು ಫೆ.೨೨ರಂದು ಗುರುಮಠಕಲ್‌ನಲ್ಲಿ ಪ್ರಶಸ್ತಿಯನ್ನು ವಿತರಿಸಲಿದ್ದಾರೆ.
ಹರ್ಷ: ಕಲ್ಯಾಣ ಕರ್ನಾಟಕ ಸಾಧಕ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಬೀರಪ್ಪ ಅಂಡಗಿ ಚಿಲವಾಡಗಿಯವರನ್ನು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮನ್ನವರ್,ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಪ್ರಭು ಕಿಡದಾಳ,ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಚಾಲಕರಾದ ಭರಮಪ್ಪ ಕಟ್ಟಮನಿ,ಜಿಲ್ಲಾಧ್ಯಕ್ಷರಾದ ಚನ್ನಬಸಪ್ಪ ಬೆಲ್ಲದ,ಕೊಪ್ಪಳ ತಾಲೂಕ ಅಧ್ಯಕ್ಷರಾದ ಅಂದಪ್ಪ ಬೋಳರಡ್ಡಿ,ಯಲಬುರ್ಗಾ ತಾಲೂಕ ಅಧ್ಯಕ್ಷರಾದ ಮಹೇಶ ಆರೇರ,ಎನ್.ಪಿ.ಎಸ್.ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ದೇವಪ್ಪ ಒಂಟಿಗಾರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Top