ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ನಿಮಿತ್ಯ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವಿಶೇಷ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ ಅವರು ಮಾತನಾಡಿ, ಮಾನಸಿಕ ಸದೃಢತೆ ಇದ್ದಲ್ಲಿ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಲು ಸಾಧ್ಯ. ದೇಶದಲ್ಲಿ ಸುಮಾರು ೧೪ ಕೋಟಿ ಜನ ಮಾನಸಿಕ ಅಸ್ವಸ್ಥ್ಯತೆ ಎದುರಿಸುತ್ತಿದ್ದು, ಇದರಿಂದಾಗಿಯೇ ಅತ್ಯಾಚಾರ, ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ. ದೇಶದಲ್ಲಿ ಮಾನಸಿಕ ವೈದ್ಯರ ಕೊರತೆ ಹೆಚ್ಚಾಗಿದ್ದು, ಸಮಾಜದಲ್ಲಿ ಮನೆ ಮಾಡಿರುವ ಮೌಢ್ಯತೆ, ಅಂಧಾನುಕರಣೆ, ಮೂಢನಂಬಿಕೆಗಳನ್ನು ಬೇರು ಸಮೇತ ನಿರ್ಮೂಲನೆ ಮಾಡದ ಹೊರತು, ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗದು. ಮಾನಸಿಕ ಅಸ್ವಸ್ಥ್ಯರಿಗೆ ಸಕಾಲದಲ್ಲಿ ಉತ್ತಮ ಚಿಕಿತ್ಸೆ ದೊರಕಿಸುವ ಮೂಲಕ ಅವರನ್ನು ಮುಖ್ಯ ವಾಹಿನಿಗೆ ತರುವಂತಹ ಕಾರ್ಯ ಆಗಬೇಕಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಮಾತನಾಡಿ, ಸಮಾಜದಲ್ಲಿನ ಮೌಢ್ಯತೆ, ಮೂಢ ನಂಬಿಕೆಗಳನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾದ ದೃಶ್ಯ ಮಾಧ್ಯಮಗಳು, ಅವುಗಳನ್ನೇ ಜನರ ಮನದಲ್ಲಿ ಬಿತ್ತುತ್ತಿರುವುದು ದುರಾದೃಷ್ಟವಾಗಿದೆ. ಇದನ್ನು ತಡೆಗಟ್ಟಲು ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗಗಳು ಇನ್ನಾದರೂ, ಈ ನಿಟ್ಟಿನಲ್ಲಿ ಗಂಭೀರವಾಗಿ ಚಿಂತಿಸುವ ಅಗತ್ಯವಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹದೇವಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್. ವೀರಣ್ಣ, ಜಿಲ್ಲಾ ಸರ್ಕಾರಿ ವಕೀಲರಾದ ವಿ.ಎಂ. ಭೂಸನೂರಮಠ ಅವರು ಕಾರ್ಯಕ್ರಮ ಕುರಿತು ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ ಚೇಗರಡ್ಡಿ, ಕಿರಿಯ ವ್ಯವಹಾರ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಕಾವೇರಿ, ಲಾ ಅಕಾಡೆಮಿ ಅಧ್ಯಕ್ಷೆ ಸಂಧ್ಯಾ ಬಿ. ಮಾದಿನೂರ, ರೋಟರಿ ಕ್ಲಬ್ ಅಧ್ಯಕ್ಷೆ ಇಂದಿರಾ ಬಾವಿಕಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ. ಕೃಷ್ಣ ವಿ ಓಂಕಾರ್ ಅವರು ತೀವ್ರತರವಾದ ಮಾನಸಿಕ ಕಾಯಿಲೆ ಬಗ್ಗೆ ಹಾಗೂ ಮಾನಸಿಕ ಆರೋಗ್ಯ ಅಧಿಕಾರಿ ಡಾ. ಎಂ.ಎಂ. ಕಟ್ಟಿಮನಿ ಅವರು ಮಾನಸಿಕ ರೋಗದ ಮುಂಜಾಗ್ರತೆ ಕ್ರಮದ ಬಗ್ಗೆ ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದರು.
Please follow and like us: