fbpx

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಸಮುದಾಯದ ಸಹಭಾಗಿತ್ವ ಅಗತ್ಯ ಡಾ|| ಪ್ರವೀಣಕುಮಾರ ಜಿ.ಎಲ್.

ಕೊಪ್ಪಳ, ನ.೦೯ (ಕ ವಾ)  ಬಾಲ್ಯಾವಸ್ಥೆ ನಮ್ಮ ಜೀವನದ ಪ್ರಮುಖ ಘಟ್ಟವಾಗಿದೆ. ಇಂತಹ ಬಾಲ್ಯವನ್ನು ಮಕ್ಕಳು ಪರಿಪೂರ್ಣವಾಗಿ ಅನುಭವಿಸಲು ನಾವೆಲ್ಲರೂ ಅವಕಾಶ ಮಾಡಿಕೊಡಬೇಕು. ಏಕೆಂದರೆ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಸಮುದಾಯದ ಸಹಭಾಗಿತ್ವ ತುಂಬಾ ಮುಖ್ಯವಾಗಿದೆ ಎಂದು ಪ್ರಭಾರಿ ಜಿಲ್ಲಾಧಿಕಾರಿ ಡಾ|| ಪ್ರವೀಣಕುಮಾರ.ಜಿ.ಎಲ್ ಅವರು ಹೇಳಿದರು.
     ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಯುನಿಸೆಫ್ ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘಟನೆಗಳ ಸಂಯೋಜನೆಯಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ತು ಮತ್ತು ಸಮಾಲೋಚನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
     ನಮ್ಮ ಸಂಸ್ಕೃತಿಯಲ್ಲಿ ಮಕ್ಕಳನ್ನು ದೇವರಂತೆ ಕಾಣುತ್ತೇವೆ. ಆದರೆ ಈಗಿನ ಸ್ಥಿತಿಯಲ್ಲಿ ಮಕ್ಕಳನ್ನು ದೇವರ ಸ್ಥಾನವಲ್ಲ, ಮನುಷ್ಯನಾಗಲೂ ಸಹ ಬಿಡುತ್ತಿಲ್ಲ. ಬಾಲ್ಯವಿವಾಹ, ಬಾಲಕಾರ್ಮಿಕತೆ, ಲೈಂಗಿಕ ದೌರ್ಜನ್ಯ, ಅಪೌಷ್ಟಿಕತೆ ದಿನ ನಿತ್ಯ ನೋಡುವ ಸಾಮಾನ್ಯ ಪ್ರಕರಣಗಳಾಗಿವೆ. ಇಂತಹ ಪ್ರಕರಣಗಳಿಂದಾಗಿ ಮಕ್ಕಳಿಗೆ ಅವರ ಅಸ್ತಿತ್ವಕ್ಕೆ ಕಿಂಚಿತ್ತು ಬೆಲೆ ಸಿಗುತ್ತಿಲ್ಲ. ಇದನ್ನು ತಪ್ಪಿಸಬೇಕೆಂದರೆ, ಮಕ್ಕಳು ಸ್ಥಿತಿವಂತರಾಗಿ, ಗೌರವಯುಕ್ತವಾಗಿ ಬೆಳೆಯಲು ಅವರ ಬಾಲ್ಯವನ್ನು ಸಂಪೂರ್ಣವಾಗಿ ಅನುಭವಿಸಲು ಬಿಡಿ. ಇದಕ್ಕೆ ಪೂರಕವಾಗಿ ಸರಕಾರ ಮತ್ತು ಸಮಾಜದ ಸಹಭಾಗಿತ್ವ ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸಹ ಮಕ್ಕಳ ಸಂಪೂರ್ಣ ಸರ್ವತೋಮುಖ ಬೆಳವಣಿಗೆಗೆ ದಾರಿ ಕಲ್ಪಿಸಿಕೊಡೋಣ ಎಂದು ಅವರು ಕರೆ ನೀಡಿದರು.
     ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ವಸಂತಪ್ರೇಮಾ ಮಾತನಾಡಿ, ಮಕ್ಕಳ ಹಕ್ಕುಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮಕ್ಕಳ ಜೊತೆ ವರ್ತಿಸಲು ನಮ್ಮ ಮನೋಭಾವ ಧನಾತ್ಮಕವಾಗಿರಬೇಕು.   ಮಕ್ಕಳೆಲ್ಲರೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ೧೦೯೮ ಮಕ್ಕಳ ಸಹಾಯವಾಣಿಯ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಶೇಖರಗೌಡ ರಾಮತ್ನಾಳ ಮಾತನಾಡಿ, ಬಾಲ್ಯವಿವಾಹದಿಂದ ನೊಂದಿದ, ಬಾಲ್ಯವಿವಾಹಕ್ಕೊಳಗಾದ ಪ್ರಕರಣಗಳಲ್ಲಿ ಮಕ್ಕಳ ಜವಾಬ್ದಾರಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನೋಡಿಕೊಳ್ಳುತ್ತದೆ. ಮಕ್ಕಳ ಎಲ್ಲಾ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಸದಾ ಸಿದ್ಧವಿರುತ್ತದೆ ಎಂದು ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ರೆಹಮತ್ ಉಲ್ಲಾ ಬೇಗಂ ಮಾತನಾಡಿ, ಮಕ್ಕಳು ತಮ್ಮ ಹಕ್ಕುಗಳನ್ನು ತಾಯಿಯ ಗರ್ಭದಿಂದಲೇ ಪಡೆದುಕೊಂಡಿರು
     ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಸಂಯೋಜಕ ಹರೀಶ್ ಜೋಗಿ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲಾ ಮಟ್ಟದ ಮಕ್ಕಳ ಸಂಸತ್ತು ಮತ್ತು ಸಮಾಲೋಚನೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಕ್ಕಳ ಸಮಸ್ಯೆಗಳನ್ನು ಚರ್ಚಿಸಿ ಅವುಗಳಿಗೆ ಸೂಕ್ತ ಪರಿಹಾರಗಳನ್ನು ಪಡೆಯಲು ಪ್ರಯತ್ನಿಸಲಾಗುವುದು. ನ. ೧೭ ರಂದು ಬೆಂಗಳೂರಿನ ವಿಧಾನಸೌಧದಲ್ಲಿ   ಮುಖ್ಯಮಂತ್ರಿಗಳೊಂದಿಗೆ ನಡೆಯುವ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಿಂದ ೨ ಮಕ್ಕಳನ್ನು ಆಯ್ಕೆ ಮಾಡಿ ಕಳುಹಿಸಿ ಕೊಡಲಾಗುವುದು ಎಂದರು.
     ಯುನಿಸೆಫ್ ತಾಲೂಕಾ ಸಂಯೋಜಕ ಕಲ್ಲಪ್ಪ ತಳವಾರ ನಿರೂಪಿಸಿದರು. ಕುಷ್ಟಗಿ ತಾಲೂಕಾ ಯುನಿಸೆಫ್ ಸಂಯೋಜಕ ಶರಣಪ್ಪ ವಂದಿಸಿದರು.

ತ್ತಾರೆ. ಇಂದಿನ ಮಕ್ಕಳು ತಮ್ಮ ಹಕ್ಕುಗಳ ಕುರಿತು ತಿಳಿದುಕೊಳ್ಳುವುದು ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

Please follow and like us:
error

Leave a Reply

error: Content is protected !!