You are here
Home > Koppal News > ವಿಧಾನಸಭಾ ಚುನಾವಣೆ : ನಾಲ್ವರಿಂದ ನಾಮಪತ್ರ ಸಲ್ಲಿಕೆ

ವಿಧಾನಸಭಾ ಚುನಾವಣೆ : ನಾಲ್ವರಿಂದ ನಾಮಪತ್ರ ಸಲ್ಲಿಕೆ

ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಶನಿವಾರದಂದು ಒಟ್ಟು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
  ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕೆ.ಜೆ.ಪಿ. ಅಭ್ಯರ್ಥಿಯಾಗಿ ಕೆ.ಎಂ. ಸೈಯದ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ನಿರ್ಮಲ ಮಲ್ಲಿಕಾರ್ಜುನ ಹಡಪದ, ಸಿಪಿಐ(ಎಂಎಲ್) ನಿಂದ ಮಂಜುನಾಥ ಈರಪ್ಪ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.  ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಬ್ದುಲ್ ರಜಾಕ್‌ಸಾಬ್ ಅವರು ಶನಿವಾರದಂದು ಮತ್ತೆ ಒಂದು ನಾಮಪತ್ರ ಸಲ್ಲಿಸಿದ್ದಾರೆ.  ಉಳಿದಂತೆ ಕುಷ್ಟಗಿ, ಯಲಬುರ್ಗಾ ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

Leave a Reply

Top