ಕೊಪ್ಪಳ : ೩೨೫೫೯ ಹೊಸ ಮತದಾರರ ಸೇರ್ಪಡೆ

ಚುನಾವಣಾ ಆಯೋಗದ ಸೂಚನೆಯಂತೆ ಏ. ೦೭ ಕ್ಕೆ ಮತದಾರರ ನೋಂದಣಿ ಕಾರ್ಯ ಪೂರ್ಣಗೊಂಡಿದ್ದು, ಇದರಿಂದಾಗಿ ಕೊಪ್ಪಳ ಜಿಲ್ಲೆಯಲ್ಲಿ ೩೨೫೫೯ ಹೊಸ ಮತದಾರರು ಸೇರ್ಪಡೆಗೊಂಡಿದ್ದಾರೆ.
  ಜಿಲ್ಲೆಯಲ್ಲಿ ಮತದಾರರ ನೋಂದಣಿಗೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿತ್ತು.  ವಿಶೇಷವಾಗಿ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಿ ಪ್ರಮಾಣ ಕಡಿಮೆ ಇತ್ತು.  ಈ ಭಾಗದಲ್ಲಿ ಮತದಾರರ ನೋಂದಣಿಗೆ ಜಾಗೃತಿ ಮೂಡಿಸಲು ವಿಶೇಷ ಆದ್ಯತೆ ನೀಡಲಾಗಿತ್ತು.  ಕೊಪ್ಪಳ ಜಿಲ್ಲೆಯಲ್ಲಿ ಒಟ್ಟಾರೆ ೩೫೯೬೬ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು.  ಈ ಪೈಕಿ ಸೂಕ್ತ ದಾಖಲಾತಿಗಳನ್ನು ಸಲ್ಲಿಸದಿರುವುದೂ ಸೇರಿದಂತೆ ವಿವಿಧ ಕಾರಣಗಳಿಗಾಗಿ ಸುಮಾರು ೩೪೦೭ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 
ಕುಷ್ಟಗಿ  – ೪೪೬೭, 
ಕನಕಗಿರಿ- ೭೨೫೮, 
ಗಂಗಾವತಿ- ೭೮೧೮ 
ಯಲಬುರ್ಗಾ- ೫೪೧೧ 
ಕೊಪ್ಪಳ  – ೭೬೦೫ 
 ಹೊಸ ಮತದಾರರು ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.
  ಹೊಸ ಮತದಾರರ ಸೇರ್ಪಡೆ ಪಟ್ಟಿಯನ್ನು ಪೂರಕ ಪಟ್ಟಿ-೨ ಎಂದು ನಿಗದಿಪಡಿಸಲಾಗಿದ್ದು, ಏಪ್ರಿಲ್ ೨೫ ರ ಒಳಗಾಗಿ ಈ ಹೊಸ ಮತದಾರರ ಪೂರಕ ಪಟ್ಟಿಯನ್ನು ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಗೆ ಹಾಗೂ ರಾಜಕೀಯ ಪಕ್ಷಗಳಿಗೆ ಒದಗಿಸಲಾಗುವುದು.  ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಸಿದವರು,  ತಮ್ಮ ಹೆಸರು ಸೇರ್ಪಡೆಯಾಗಿರುವುದರ ಬಗ್ಗೆ ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ  ತಿಳಿಸಿದೆ.

Related posts

Leave a Comment