You are here
Home > Koppal News > ಅ.೧೬ ರಂದು ಶ್ರೀ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ ಉದ್ಘಾಟನೆ

ಅ.೧೬ ರಂದು ಶ್ರೀ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ ಉದ್ಘಾಟನೆ

: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ ಅ. ೧೬ ರಿಂದ ೨೪ ರವರೆಗೆ ವೈಭವಯುತವಾಗಿ ಜರುಗಲಿದೆ.  
  ದಸರಾ ಮಹೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ಅ.೧೬ರಂದು ಸಾಯಂಕಾಲ ೬.೩೦ ಕ್ಕೆ   ನೆರವೇರಿಸಲಿದ್ದು, ಸಂಸದ ಶಿವರಾಮಗೌಡ ಅವರು ದಸರಾ ಮಹೋತ್ಸವ ಘಟಸ್ಥಾಪನೆಯ ಉದ್ಘಾಟನೆ ನೆರವೇರಿಸುವರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ  ಸಂಗಣ್ಣ ಕರಡಿ ಅವರು ವಹಿಸುವರು. 
ಮುಖ್ಯ ಅತಿಥಿಗಳಾಗಿ ಪ್ರವಾಸೋದ್ಯಮ ಸಚಿವ ಆನಂದಸಿಂಗ್, ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈದರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಶಾಸಕರಾದ ಪರಣ್ಣ ಮುನವಳ್ಳಿ, ಅಮರೇಗೌಡ ಪಾಟೀಲ್ ಬಯ್ಯಾಪುರ, ಈಶಣ್ಣ ಗುಳಗಣ್ಣವರ, ಶಿವರಾಜ ತಂಗಡಗಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಹಾಲಪ್ಪ ಆಚಾರ, ತಾ.ಪಂ.ಅಧ್ಯಕ್ಷ ನಾಗರಾಜ ಚಲ್ಲೊಳ್ಳಿ, ಜಿ.ಪಂ.ಸದಸ್ಯ ಟಿ.ಜನಾರ್ಧನ, ತಾ.ಪಂ. ಸದಸ್ಯೆ ಸುಶೀಲಮ್ಮ ವೆಂಕಟೇಶ ವಡ್ಡರ್, ಗ್ರಾ.ಪಂ.ಅಧ್ಯಕ್ಷ ರಾಮಣ್ಣ ನಿಂಗಪ್ಪ ನಾಯಕ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್.ಮಂಜುನಾಥ ಪ್ರಸಾದ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ ಮುಂತಾದವರು ಭಾಗವಹಿಸುವರು ಎಂದು ಶ್ರೀ ಹುಲಿಗೆಮ್ಮದೇವಿ ದೇವಸ್ಥಾನ ಸಮಿತಿ ಅಧ್ಯಕ್ಷ ರಮೇಶ ವೈದ್ಯ, ಹಾಗೂ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್.ಚಂದ್ರಮೌಳಿ ಅವರು ತಿಳಿಸಿದ್ದಾರೆ.

Leave a Reply

Top