ಜಿ.ಪಂ. ಹಿರೇವಂಕಲಕುಂಟಾ ಕ್ಷೇತ್ರ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ಜಿಲ್ಲಾ ಪಂಚಾಯತಿಯ ಹಿರೇವಂಕಲಕುಂಟಾ ಕ್ಷೇತ್ರದ ಸದಸ್ಯರಾಗಿದ್ದ ಶ್ಯಾಮೀದ್ ಸಾಬ್ ಚಳ್ಳಾರಿ ಅವರ ನಿಧನದಿಂದ ತೆರವಾದ ಸದಸ್ಯ ಸ್ಥಾನಕ್ಕಾಗಿ ಉಪಚುನಾವಣೆ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.
  ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯನ್ವಯ ಉಪಚುನಾವಣೆಯ ಅಧಿಸೂಚನೆಯನ್ನು ಜಿಲ್ಲಾಧಿಕಾರಿಗಳು ಜು. ೧೬ ರಂದು ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರಗಳ ಸಲ್ಲಿಕೆ ಪ್ರಾರಂಭವಾಗಲಿದೆ.  ನಾಮಪತ್ರ ಸಲ್ಲಿಕೆಗೆ ಜು. ೨೩ ಕೊನೆಯ ದಿನಾಂಕವಾಗಿದ್ದು, ಜು. ೨೪ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.  ಉಮೇದುವಾರಿಕೆಯನ್ನು ಹಿಂಪಡೆಯಲು ಜು. ೨೬ ಕೊನೆಯ ದಿನಾಂಕವಾಗಿದ್ದು, ಮತದಾನದ ಅಗತ್ಯಬಿದ್ದಲ್ಲಿ, ಆಗಸ್ಟ್ ೫ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಆಗಸ್ಟ್ ೮ ರಂದು ಬೆಳಿಗ್ಗೆ ೮ ಗಂಟೆಯಿಂದ ಯಲಬುರ್ಗಾದಲ್ಲಿ ನಡೆಯುವುದು.  ಆಗಸ್ಟ್ ೯ ರ ಒಳಗಾಗಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.  ಚುನಾವಣಾ ನೀತಿ ಸಂಹಿತೆ ಸಂಬಂಧಪಟ್ಟ ಕ್ಷೇತ್ರದ ವ್ಯಾಪ್ತಿಯಲ್ಲಿ ಜು. ೧೬ ರಿಂದ ಆಗಸ್ಟ್ ೯ ರವರೆಗೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

Leave a Reply