ಶಾಸಕ ಸಂಗಣ್ಣ ಕರಡಿ ಅವರಿಂದ ಕೃಷಿ ವಸ್ತುಪ್ರದರ್ಶನ ಉದ್ಘಾಟನೆ

 ಕೃಷಿ ಇಲಾಖೆಯು ಆತ್ಮ ಯೋಜನೆಯಡಿ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಕೊಪ್ಪಳ ನಗರದ ಗವಿಮಠ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕೃಷಿ ವಸ್ತುಪ್ರದರ್ಶನ ಮಳಿಗೆಯನ್ನು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಉದ್ಘಾಟಿಸಿದರು.
  ಕೃಷಿ ವಸ್ತುಪ್ರದರ್ಶನ ಮಳಿಗೆಯಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳು, ನೂತನ ಕೃಷಿ ಉಪಕರಣಗಳು ಸೇರಿದಂತೆ ರೈತರಿಗೆ ಉಪಯುಕ್ತವಾಗುವಂತಹ ಮಾಹಿತಿ ಆಧಾರಿತ ಪ್ರದರ್ಶನ ಇದಾಗಿತ್ತು.  
  ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಂಟಿಕೃಷಿ ನಿರ್ದೇಶಕ ಬಾಲರೆಡ್ಡಿ ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error