ನಾಳೆ ನಗರಕ್ಕೆ ಮುಖ್ಯಮಂತ್ರಿ

ಕೊಪ್ಪಳ ನ.: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನ. ೧೨ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಧ್ಯಾಹ್ನ ೨-೩೦ ಗಂಟೆಗೆ ಗಿಣಿಗೇರಾ ಏರ್‌ಸ್ಟ್ರಿಪ್‌ಗೆ ಆಗಮಿಸುವರು. ನಂತರ ಬಸಾಪುರ ಬಳಿ ಏರ್ಪಡಿಸಲಾಗಿರುವ ಭಾಗ್ಯಲಕ್ಷ್ಮಿ ಯೋಜನೆ ಜಿಲ್ಲೆಯ ಫಲಾನುಭವಿಗಳ ತಾಯಂದಿರಿಗೆ ಸೀರೆ ವಿತರಣೆ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಕಾರ್ಯಕ್ರಮ, ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ಹಾಗೂ ಪ್ರವಾಹ ಸಂತ್ರಸ್ಥರಿಗೆ ಆಸರೆ ಮನೆಗಳ ಹಕ್ಕು ಪತ್ರಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ ೪-೩೦ ಗಂಟೆಗೆ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

Leave a Reply