You are here
Home > Koppal News > ಮೇ.೨೨ ರಂದು ತಾ.ಪಂ. ಕೆ.ಡಿ.ಪಿ. ಸಭೆ

ಮೇ.೨೨ ರಂದು ತಾ.ಪಂ. ಕೆ.ಡಿ.ಪಿ. ಸಭೆ

   ಕೊಪ್ಪಳ ತಾಲೂಕ ಪಂಚಾಯತಿಯ ಕೆ.ಡಿ.ಪಿ. ಸಭೆಯನ್ನು ಮೇ.೨೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಏರ್ಪಡಿಸಲಾಗಿದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಲಿದ್ದಾರೆ. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಮೇ.೨೨ ರಂದು ತಾ.ಪಂ.ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Top