ಸಂಗೀತ ನೃತ್ಯ ಅಕಾಡೆಮಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ.

ಕೊಪ್ಪಳ, ಜು.17 ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ
ಪ್ರಸಕ್ತ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ
ಕೀರ್ತನ ಮತ್ತು ಗಮಕ ಸೇರಿದಂತೆ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16
ರಿಂದ 24 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು,
ಆಯ್ಕೆಯಾದ ಅಭ್ಯರ್ಥಿಗಳಿಗೆ 10,000 ರೂ.ಗಳನ್ನು ಶಿಷ್ಯ ವೇತನವಾಗಿ
ನೀಡಲಾಗುವುದು. ಅರ್ಜಿಗಳನ್ನು ಬೆಂಗಳೂರಿನ ಅಕಾಡೆಮಿಯ ಕಛೇರಿ ಹಾಗೂ ಆಯಾ ಜಿಲ್ಲೆಯ
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಉಚಿತವಾಗಿ
ಪಡೆಯಬಹುದಾಗಿದೆ. ಅರ್ಜಿಯ ಜೊತೆ ಇತ್ತೀಚಿನ ಪಠ್ಯಕ್ರಮವನ್ನು ನೀಡಲಾಗಿದ್ದು, ಅಂಚೆ ಮೂಲಕ
ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು 10 ರೂ.ಗಳ ಸ್ಟ್ಯಾಂಪ್ ಹಚ್ಚಿದ
ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ,
ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560 002 ಇಲ್ಲಿಗೆ
ಕಳುಹಿಸಿಕೊಡಬಹುದು. ಅಲ್ಲದೆ ಅರ್ಜಿಗಳನ್ನು ಅಕಾಡೆಮಿಯ ಅಂತರ್ಜಾಲ ತಾಣ : www.karnatakasangeethanrithyaacademy.org
ಅಥವಾ ಈಮೇಲ್ ವಿಳಾಸ : karnatakasangeeta@gmail.com ಮೂಲಕ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಮೇಲ್ಕಂಡ ವಿಳಾಸಕ್ಕೆ ಕಳುಹಿಸಿಕೊಡಲು ಆಗಸ್ಟ್.14 ಕೊನೆ
ದಿನಾಂಕವಾಗಿದೆ ಎಂದು ಕರ್ನಾಟಕ ಸಂಗೀತ ಅಕಾಡೆಮಿಯ ರಿಜಿಸ್ಟ್ರಾರ್ ಟಿ.ಜಿ.ನರಸಿಂಹಮೂರ್ತಿ
ತಿಳಿಸಿದ್ದಾರೆ.
Please follow and like us:
error

Related posts

Leave a Comment