ಏ. ೧೪ ರಂದು ಕೊಪ್ಪಳದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ದಿನಾಚರಣೆ

ಕೊಪ್ಪಳ ಏ.   ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಮತ್ತು ನಗರಸಭೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ೧೨೪ ನೇ ಜನ್ಮದಿನೋತ್ಸವ ಕಾರ್ಯಕ್ರಮ ಏ. ೧೪ ರಂದು ಕೊಪ್ಪಳದಲ್ಲಿ ಜರುಗಲಿದೆ.
  ಅಂದು ಬೆಳಿಗ್ಗೆ ೭-೩೦ ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಮೆರವಣಿಗೆಯು ಕೊಪ್ಪಳ ತಹಸಿಲ್ದಾರರ ಕಚೇರಿ ಆವರಣದಿಂದ ಹೊರಟು, ಅಂಬೇಡ್ಕರ್ ವೃತ್ತ, ಜವಾಹರ ರಸ್ತೆ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ಬರಲಿದೆ.  ಅಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಅವರು ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ, ಅಮರನಾಥ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ್ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ್ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ರಾಮಣ್ಣ ಹಳ್ಳಿಗುಡಿ, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಬಳ್ಳಾರಿ ವಿ.ಎಸ್.ಕೆ. ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಎನ್. ಶಾಂತ್‌ನಾಯ್ಕ ಅವರು ಅಂಬೇಡ್ಕರ್ ಅವರ ಕುರಿತು ವಿಶೇಷ ಉಪನ್ಯಾಸ ನೀಡುವರು.

Related posts

Leave a Comment