You are here
Home > Koppal News > ವಸತಿ ಶಾಲೆಗಳಲ್ಲಿ ೬ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.

ವಸತಿ ಶಾಲೆಗಳಲ್ಲಿ ೬ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.

ಕೊಪ್ಪಳ, ಡಿ.೧೮ (ಕ ವಾ) ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಇವರ ವತಿಯಿಂದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ೨೦೧೬-೧೭ ನೇ ಸಾಲಿಗೆ ೬ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
     ಸರ್ಕಾರವು ಗ್ರಾಮೀಣ ಪ್ರದೇಶದ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಪ್ರತಿಭಾವಂತ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ೬ನೇ ತರಗತಿಯಿಂದ ೧೦ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ವ್ಯಾಸಾಂಗ ಮಾಡಲು ವಿದ್ಯಾರ್ಥಿಗಳಿಂದ ಈ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲಿಚ್ಛಿಸುವ ಪ.ಜಾತಿ ಮತ್ತು ಪ.ಪಂಗಡ ಹಾಗೂ ಪ್ರವರ್ಗ-೧ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಮಿತಿ ೨.೫೦ ಲಕ್ಷ ರೂ., ಪ್ರವರ್ಗ-೨ಎ, ೨ಬಿ, ೩ಎ, ೩ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯದ ಮಿತಿ ೦೧.೦೦ ಲಕ್ಷ ರೂ.ಗಳ ಒಳಗಿರಬೇಕು.
     ಅರ್ಜಿಗಳನ್ನು ಜಿಲ್ಲೆಯ ಎಲ್ಲಾ ವಸತಿ ಶಾಲೆಗಳಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಗಳಲ್ಲಿ, ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಗಳಲ್ಲಿ ಡಿ.೧೬ ರಿಂದ ಜ.೦೧ ರವರೆಗೆ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳನ್ನು ಲಗತ್ತಿಸಿ, ೨೦೧೬ ಜನೇವರಿ ೨೦ ರ ಸಂಜೆ ೫ ಗಂಟೆಯೊಳಗಾಗಿ ಆಯಾ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು. ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಜನೇವರಿ ೨೫ ರಿಂದ ಜ.೩೧ ರೊಳಗಾಗಿ ಪಡೆಯಬಹುದಾಗಿದ್ದು, ಪ್ರವೇಶ ಪರೀಕ್ಷೆಗಳು ೨೦೧೬ ರ ಮಾರ್ಚ್.೦೬ ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಆಯಾ ತಾಲೂಕುಗಳ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ತಾಲೂಕು ಪ್ರವೇಶ ಪರೀಕ್ಷಾಧಿಕಾರಿಗಳ ವಿವರ ಇಂತಿದೆ.  ಅಮೀನ್‌ಸಾಬ್, ಪ್ರಾಚಾರ್ಯರು, ಮೊರಾರ್ಜಿ ದೇಸಾಯಿ, ಪದವಿ ಪೂರ್ವ ವಿದ್ಯಾಲಯ, ಹಿರೇಸಿಂಧೋಗಿ- ೯೪೮೧೬೬೦೪೫೯. ವಿರುಪಾಕ್ಷಪ್ಪ ಹನುಮಶೆಟ್ಟಿ, ಪ್ರಾಚಾರ್ಯರು, ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ, ತಾ.ಯಲಬುರ್ಗಾ-೯೯೮೬೮೯೬೨೪೦. ಸಂತೋಷಿರಾಣಿ, ಪ್ರಾಚಾರ್ಯರು, ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ, ತಾ.ಗಂಗಾವತಿ-೮೧೪೭೬೧೭೯೨೯. ಹನುಮೇಶ, ಪ್ರಾಚಾರ್ಯರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಾ.ಕುಷ್ಟಗಿ-೮೭೨೨೬೫೦೩೨೨.
     ಅರ್ಜಿ ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕೃತ ವೆಬ್‌ಸೈಟ್
www.kreis.kar.nic.inನಲ್ಲಿ ಪಡೆಯಬಹುದಾಗಿದೆ. ಅಲ್ಲದೆ ಈ ವರ್ಷದಿಂದ ಪ್ರಶ್ನೆ ಪತ್ರಿಕೆಯಲ್ಲಿ ಅಲ್ಪ ಬದಲಾವಣೆ ತರಲು ಉದ್ದೇಶಿಸಲಾಗಿದ್ದು, ಅಗತ್ಯ ಮಾಹಿತಿಗಾಗಿ ಪಾಲಕರು, ಶಿಕ್ಷಕರು, ವಿದ್ಯಾರ್ಥಿಗಳು ಆಯಾ ತಾಲೂಕಿನ ಪ್ರವೇಶ ಪರೀಕ್ಷಾಧಿಕಾರಿಗಳನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ.ಕಲ್ಲೇಶ ಅವರು ತಿಳಿಸಿದ್ದಾರೆ.

Leave a Reply

Top