fbpx

ಜಗಜೀವನರಾಮ್, ಅಂಬೇಡ್ಕರ್ ಜನ್ಮ ದಿನಾಚರಣೆ : ಸಾಂಕೇತಿಕ ಆಚರಣೆ

 : ಲೋಕಸಭೆ ಚುನಾವಣೆ ಇರುವ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏ.೦೫ ರಂದು  ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನರಾಮ್‌ರವರ ೧೦೭ನೇ ಜನ್ಮ ದಿನಾಚರಣೆ ಹಾಗೂ ಏ. ೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೨೩ನೇ ಜನ್ಮ ದಿನಾಚರಣೆಯನ್ನು ಆಯಾ ದಿನದಂದು ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಮಹಾನ್ ವ್ಯಕ್ತಿಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ತಿಳಿಸಿದ್ದಾರೆ.
  ಆಯಾ ದಿನದಂದು ಜಯಂತಿಯನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಹನೀಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಬೇಕು.  ಅಲ್ಲದೆ ಆಯಾ ದಿನದಂದು ಬೆಳಿಗ್ಗೆ  ೯ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಮಹಾನ್ ವ್ಯಕ್ತಿಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಸರಳ, ಸಾಂಕೇತಿಕವಾಗಿ ಆಚರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ತಪ್ಪದೆ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!