You are here
Home > Koppal News > ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ’ವಚನ ಕಮ್ಮಟ’ ಪರೀಕ್ಷೆ

ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ’ವಚನ ಕಮ್ಮಟ’ ಪರೀಕ್ಷೆ

 ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಚಿತ್ರದುರ್ಗದ ಶ್ರೀ ಮುರುಘಾಮಠದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ  ’ವಚನ ಕಮ್ಮಟ’ ಪರೀಕ್ಷೆಯನ್ನ ಪಿ.ಯು.ಸಿ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಸುಮಾರು ೩೦ ವಿದ್ಯಾರ್ಥಿಗಳು ಹಾಜರಿದ್ದರು. ಈ ಪರೀಕ್ಷೆಯಲ್ಲಿ ವಚನ ಕಮ್ಮಟ ಪರೀಕ್ಷಾ ಸಂಯೋಜಕರಾದ ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್ ಉಪಸ್ಥಿತರಿದ್ದರು.
          ಈ ಪರೀಕ್ಷೆಯಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳಿಗೆ ಶ್ರೀ ಮುರುಘಾಮಠದಿಂದ ಪ್ರಮಾಣ ಪತ್ರಗಳನ್ನು ಮತ್ತು ಕಾಲೇಜ್ ಹಾಗೂ ಜಿಲ್ಲಾ ಮಟ್ಟದಲ್ಲಿ ಅತೀ ಹೆಚ್ಚು ಅಂಕ

ಪಡದ ವಿದ್ಯಾರ್ಥಿಗಳಿಗೆ ವಿಶೇಷ ಪ್ರಮಾಣ ಪತ್ರ ನೀಡಲಾಗುತ್ತದೆ. ಅಲ್ಲದೇ ರಾಜ್ಯದಲ್ಲಿ ಪ್ರಥಮ, ದ್ವಿತೀಯ, ತೃತೀಯ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶ್ರೀ ಮುರುಘಾಮಠದ ಶ್ರೀಗಳಿಂದ ಪದಕ, ಫಲಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ನೀಡಲಾಗುತ್ತದೆ.

Leave a Reply

Top