ಕೊಪ್ಪಳ ಡಿ. ೦೮ (ಕ ವಾ)ತೋಟಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಶೇ. ೯೦ ರ ಸಹಾಯಧನ ಮಂಜೂರಾತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳಿಗೆ ಹನಿ ನೀರಾವರಿ ಅಳವಡಿಸಲು ಶೇ. ೯೦ ರ ಸಹಾಯಧನವನ್ನು ಮಾರ್ಗಸೂಚಿಯನ್ವಯ ನೀಡಲು ಅವಕಾಶವಿದೆ. ಅರ್ಹ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ತಾಲೂಕು ತೋಟಗಾರಿಕೆ ಕಚೇರಿಗಳು ಅಥವಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ್ ಕೋಟಿಮನಿ ಅವರು ತಿಳಿಸಿದ್ದಾರೆ.

Please follow and like us: