fbpx

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ.

ಕೊಪ್ಪಳ ಆ. ೦೧ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಆ. ೦೩ ಮತ್ತು ೦೪ ರಂದು ಎರಡು ದಿನಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಸಚಿವರು ಆ. ೦೩ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ಯಲಬುರ್ಗಾ ತಾಲೂಕಿನ ವೀರಾಪುರ ಗ್ರಾಮಕ್ಕೆ ಆಗಮಿಸಿ, ಹಿರೇಹಳ್ಳ ನೀರಾವರಿ ಯೋಜನೆ ಪುನರ್ವಸತಿ ಗ್ರಾಮಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಮಧ್ಯಾಹ್ನ ೦೩ ಗಂಟೆಗೆ ಕೊಪ್ಪಳ ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಿಸುವರು.  ಸಂಜೆ ೦೫ ಗಂಟೆಗೆ  ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಶುದ್ಧ ಕುಡಿಯುವ ನೀರಿನ ಕುರಿತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವರ ಜೊತೆಗೂಡಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು.  ಸಚಿವರು ಅದೇ ದಿನ ಸಂಜೆ ೬-೩೦ ಗಂಟೆಗೆ ಕಾರಟಗಿಗೆ ತೆರಳಿ ಸಾರ್ವಜನಿಕ ಕುಂದುಕೊರತೆಗಳ  ವಿಚಾರಣೆ ನಡೆಸಿ ವಾಸ್ತವ್ಯ ಮಾಡುವರು.
     ಆ. ೦೪ ರಂದು ಸಚಿವರು ಬೆಳಿಗ್ಗೆ ೧೦ ಗಂಟೆಗೆ ಹುಲಿಗಿಗೆ ಆಗಮಿಸಿ, ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ೧೦-೪೫ ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ನಡೆಸುವರು.  ಸಂಜೆ ೬-೩೦ ಗಂಟೆಗೆ ಕಾರಟಗಿಗೆ ತೆರಳಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಕೈಗೊಂಡು ವಾಸ್ತವ್ಯ ಮಾಡುವರು.
Please follow and like us:
error

Leave a Reply

error: Content is protected !!