You are here
Home > Koppal News > ಕನ್ನಡ ಪುಸ್ತಕ ಪ್ರಾಧಿಕಾರ ಸಿರಿಗನ್ನಡ ಪುಸ್ತಕ ಮಳಿಗೆ ಉದ್ಘಾಟನೆ ಹಾಗೂ ಕವಿ ಗೋಷ್ಠಿ ಕಾರ್ಯಕ್ರಮ

ಕನ್ನಡ ಪುಸ್ತಕ ಪ್ರಾಧಿಕಾರ ಸಿರಿಗನ್ನಡ ಪುಸ್ತಕ ಮಳಿಗೆ ಉದ್ಘಾಟನೆ ಹಾಗೂ ಕವಿ ಗೋಷ್ಠಿ ಕಾರ್ಯಕ್ರಮ

 ನಗರದ ಸಾಹಿತ್ಯ ಭವನ ಆವರಣದ ಕಾರ್ ಪಾರ್ಕಿಂಗ್‌ನಲ್ಲಿ ಜೂ. ೧೦ ರಂದು ಬೆ. ೧೧.೦೦ ಗಂಟೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಪುಸ್ತಕ ಮಳಿಗೆ ಉದ್ಘಾಟನೆ ಹಾಗೂ ಕವಿ ಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 
ಪುಸ್ತಕ ಮಳಿಗೆ ಉದ್ಘಾಟನೆಯನ್ನು ನೂತನ ಸಂಸದರಾದ ಸಂಗಣ್ಣ ಕರಡಿ ಅವರು ನೆರವೇರಿಸುವರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಬಂಜಗೆರೆ ಜಯಪ್ರಕಾಶ ಅವರು ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸುವರು. ಶಾಸಕ ರಾಘವೇಂದ್ರ ಹಿಟ್ನಾಳ ಅವರು ವ್ಯಂಗ್ಯ ಚಿತ್ರ ಪ್ರದರ್ಶನದ ಉದ್ಘಾಟನೆಯನ್ನು ನೆರವೇರಿಸುವರು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ. ಪಿ. ಮೋಹನರಾಜ್ ಉದ್ಘಾಟಿಸುವರು.
ಹಿರಿಯ ಸಾಹಿತಿ ಎಚ್.ಎಸ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅವರು ಆಶಯ ನುಡಿಗಳನ್ನು ಆಡುವರು. ಜಿ. ಪಂ. ಅಧ್ಯಕ್ಷ ಅಮರೇಶ ಕುಳಗಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ರೋಹಿಣಿ ಸೆಪಟ್, ಅಪರ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ್, ಉಪ ವಿಭಾಗಾಧಿಕಾರಿ ಪಿ. ಎಸ್. ಮಂಜುನಾಥ, ಪೌರಾಯುಕ್ತ ಬಿ. ಕೆ. ರುದ್ರಮುನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರು, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಸವರಾಜ ಆಕಳವಾಡಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಮರಾವ್ ಬಿ. ವಿ, ಕಸಾಪ ಜಿಲ್ಲಾಧ್ಯಕ್ಷ ವೀರಪ್ಪ ಮ. ನಿಂಗೋಜಿ, ಮೀಡಿಯಾ ಕ್ಲಬ್ ಜಿಲ್ಲಾಧ್ಯಕ್ಷ ಸೋಮರಡ್ಡಿ ಅಳವಂಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜಿ. ಎಸ್. ಗೋನಾಳ, ಮುಖ್ಯ ಗ್ರಂಥಾಲಯ ಅಧಿಕಾರಿ ಶಂಕರಗೌಡ ಹಳ್ಯಾಳ, ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆಯ ಜಿಲ್ಲಾಧ್ಯಕ್ಷ ಮಹೇಶಬಾಬು ಸುರ್ವೆ ಅವರು ವಿಶೇಷ ಅತಿಥಿಗಳಾಗಿರುವರು.
ಇದೇ ಸಂದರ್ಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರೊಂದಿಗೆ ನಡೆಯಲಿರುವ ಸಂವಾದದಲ್ಲಿ ಸಾಹಿತಿಗಳಾದ ಎ. ಎಂ. ಮದರಿ, ವಿಠ್ಠಪ್ಪ ಗೋರಂಟ್ಲಿ, ಡಾ. ಕೆ. ಬಿ. ಬ್ಯಾಳಿ, ಡಾ. ಪಾರ್ವತಿ ಪೂಜಾರ, ಡಾ. ಮಹಾಂತೇಶ ಮಲ್ಲನಗೌಡ್ರ, ಮುನಿಯಪ್ಪ ಹುಬ್ಭಳ್ಳಿ, ಡಾ. ವಿ. ಬಿ. ರಡ್ಡೇರ, ಶಿ. ಕಾ. ಬಡಿಗೇರ, ಎಸ್.ಎನ್.ತಿಮ್ಮನಗೌಡ್ರ, ಈಶ್ವರ ಹತ್ತಿ, ಹುಸೇನ್ ಪಾಷಾ, ಸಿರಾಜ್ ಬಿಸರಳ್ಳಿಅವರು ಪಾಲ್ಗೊಳ್ಳುವರು. ಬದರಿ ಪುರೋಹಿತ ಅವರಿಂದ ವ್ಯಂಗ್ಯ ಚಿತ್ರ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು. ಆದ್ದರಿಂದ ಜಿಲ್ಲೆಯ ಪುಸ್ತಕ ಪ್ರೇಮಿ ಓದುಗರು, ಸಾಹಿತಿಗಳು, ಕಲಾವಿದರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಸಿರಿಗನ್ನಡ ಪುಸ್ತಕ ಮಳಿಗೆ ಜಿಲ್ಲಾ ಪ್ರತಿನಿಧಿ ವೈ. ಬಿ. ಜೂಡಿ  ತಿಳಿಸಿದ್ದಾರೆ.

Leave a Reply

Top