ಖಾಲಿ ಉಳಿದಿರುವ ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ವೇಳಾಪಟ್ಟಿ ಪ್ರಕಟ.

ಕೊಪ್ಪಳ, ಜು.೧೫ ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚಿಗೆ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗಳು ಮುಗಿದ ನಂತರ, ಆಯ್ಕೆಯಾಗದೇ ಖಾಲಿ ಉಳಿದಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ತುಂಬಲು ಇದೀಗ ಚುನಾವಣಾ ವೇಳಾಪಟ್ಟಿಯೊಂದಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಯಲ್ಲಿ ಖಾಲಿ ಉಳಿದಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ತುಂಬಲು ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆ) ನಿಯಮಗಳು, ೧೯೯೩ ರ ೧೨ನೇ ನಿಯಮಕ್ಕನುಸಾರವಾಗಿ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅವರು ಜು.೧೫ ರಂದು ಚುನಾವಣಾ ವೇಳಾಪಟ್ಟಿಯನ್ನು ನಿಗದಿಗೊಳಿಸಿ, ಅಧಿಸೂಚನೆ ಹೊರಡಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳ ಚುನಾವಣೆಗೆ ಸಂಬಂಧಿಸಿದಂತೆ ಜು.೨೨ ನಾಮಪತ್ರಗಳನ್ನು ಸಲ್ಲಿಸಲು ಕೊನೆ ದಿನಾಂಕವಾಗಿದೆ. ಜು.೨೩ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಜು.೨೫ ಕೊನೆ ದಿನಾಂಕವಾಗಿದೆ. ಮತದಾನ ಅವಶ್ಯವಿದ್ದಲ್ಲಿ ಆಗಸ್ಟ್ ೦೨ ರಂದು ಮತದಾನ ನಡೆಯಲಿದ್ದು, ಒಟ್ಟಾರೆಯಾಗಿ ಆಗಸ್ಟ್ ೦೫ ರೊಳಗಾಗಿ ಈ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ವೇಳಾಪಟ್ಟಿಯನ್ವಯ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗಳು ಮುಗಿದ ನಂತರ ಆಯ್ಕೆಯಾಗದೇ ಖಾಲಿ ಉಳಿದಿರುವ ಹಾಗೂ ಸದ್ಯ ಚುನಾವಣೆ ಪ್ರಕ್ರಿಯೆ ನಡೆಯಲಿರುವ ಗ್ರಾ.ಪಂ. ಕ್ಷೇತ್ರಗಳ ವಿವರ ಇಂತಿದೆ.  ಕೊಪ್ಪಳ ತಾಲೂಕಿನ ತಾವರಗೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಕನಪಳ್ಳಿ-೧ ಕ್ಷೇತ್ರದಲ್ಲಿ ೦೪ ಸ್ಥಾನಗಳಿದ್ದು ಪ.ಜಾತಿ(ಮಹಿಳೆ), ಪ.ಪಂಗಡ(ಮಹಿಳೆ), ಸಾಮಾನ್ಯ(ಮಹಿಳೆ) ಹಾಗೂ ಸಾಮಾನ್ಯ ವರ್ಗಕ್ಕೆ ಮೀಸಲಿವೆ. ಕೂಕನಪಳ್ಳಿ-೨ ರಲ್ಲಿ ೦೩ ಸ್ಥಾನಗಳಿದ್ದು ಪ.ಜಾತಿ, ಹಿಂ.ವರ್ಗ-ಅ(ಮಹಿಳೆ) ಹಾಗೂ ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲಿರಿಸಲಾಗಿದೆ.  ಹಾಲವರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲವರ್ತಿ-೨ ರಲ್ಲಿ ೦೧ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಸಾಮಾನ್ಯ(ಮಹಿಳೆ)ಗೆ ಮೀಸಲಿದೆ.
 ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡ್ಡೋಣಿ-೧ ರಲ್ಲಿ ೦೩ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಪ.ಜಾತಿ, ಸಾಮಾನ್ಯ, ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲಾತಿ ಇದೆ. ಯಡ್ಡೋಣಿ-೨ ರಲ್ಲಿ ೦೨ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಪ.ಪಂಗಡ ಮತ್ತು ಸಾಮಾನ್ಯ(ಮಹಿಳೆ)ಗೆ ಮೀಸಲಿದೆ.  ಬೋದುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮನ್ನಾಪುರದಲ್ಲಿ ೦೩ ಸ್ಥಾನಗಳಿದ್ದು ಪ.ಪಂಗಡ, ಸಾಮಾನ್ಯ(ಮಹಿಳೆ) ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಾತಿ ಕಲ್ಪಿಸಲಾಗಿದೆ. ವನಜಭಾವಿ-೦೧ ಕ್ಷೇತ್ರ ಸಾಮಾನ್ಯ (ಮಹಿಳೆ)ಗೆ ಮೀಸಲಿದೆ. ಚೌಡಾಪೂರ-೦೨ ಸ್ಥಾನಗಳಿದ್ದು ಹಿಂ.ವರ್ಗ-ಅ ಮತ್ತು ಸಾಮಾನ್ಯ(ಮಹಿಳೆ) ಗೆ ಮೀಸಲಿದೆ.ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಿಕಲ್‌ನ ೦೧ ಸ್ಥಾನ ಹಿಂ.ವರ್ಗ-ಅ(ಮಹಿಳೆ) ಮತ್ತು ಚಿಕ್ಕಗೊಣ್ಣಾಗರದ ೦೧ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾತಿ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Related posts

Leave a Comment