ಮಾ.೧೯ ರಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡದ ಉದ್ಘಾಟನೆ

  ಕೊಪ್ಪಳ ತಾಲೂಕಿನ ಟಣಕನಕಲ್ ಗ್ರಾಮದ ಬಳಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡದ  ಉದ್ಘಾಟನೆ  ಮಾ.೧೯ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಟಣಕನಕಲ್ ಗ್ರಾಮದಲ್ಲಿ ಜರುಗಲಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ.  ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಅವರು ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಲಾ ಸಂಕಿರ್ಣದ ಉದ್ಘಾಟನೆಯನ್ನು  ಸಮಾಜ ಕಲ್ಯಾಣ ಹಾಗೂ ಬಂಧಿಖಾನೆ ಸಚಿವ ಎ. ನಾರಾಯಣಸ್ವಾಮಿ ಅವರು ನೆರವೇರಿಸುವರು. ಭೋಜನಾಲಯದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ನೆರವೇರಿಸುವರು. ಬಾಲಕರ ವಸತಿ ನಿಲಯದ ಉದ್ಘಾಟನೆಯನ್ನು ರಾಜ್ಯ ವಸತಿ ಸಚಿವ ವಿ.ಸೋಮಣ್ಣ ಅವರು ನೆರವೇರಿಸುವರು. ಬಾಲಕಿಯರ ವಸತಿ ನಿಲಯದ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. 
 ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಪರಣ್ಣ ಮುನವಳ್ಳಿ, ಶಿವರಾಜ ತಂಗಡಗಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶಶೀಲ್ ಜಿ.ನಮೋಶಿ, ಅಮರನಾಥ ಪಾಟೀಲ್, ಹೈ-ಕ. ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಮಹಾಂತಗೌಡ ಪಾಟೀಲ್, ಡಾ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ತ್ರಿವಿಕ್ರಮ ಜೋಶಿ, ಕಾಡಾ ಅಧ್ಯಕ್ಷ ಎಚ್.ಗಿರೇಗೌಡ, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಜನಾರ್ಧನ, ಜಿ.ಪಂ. ಸದಸ್ಯೆ ವನಿತಾ ಗಡಾದ, ತಾ.ಪಂ.ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ತಾ.ಪಂ. ಉಪಾಧ್ಯಕ್ಷೆ ಸುಜಾತಾ ಮಾಲಿ ಪಾಟೀಲ್,  ತಾ.ಪಂ.ಸದಸ್ಯ ಶ್ರೀನಿವಾಸ ಬಸಪ್ಪ ಹ್ಯಾಟಿ, ಓಜನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಶಾಂತಮ್ಮ ಮುದಿಯಪ್ಪ ವಾಲ್ಮೀಕಿ, ಗ್ರಾ.ಪಂ. ಉಪಾಧ್ಯಕ್ಷ ಹನುಮಂತಪ್ಪ ಚುಕನಕಲ್, ಗ್ರಾ.ಪಂ. ಸರ್ವ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು ಎಂದು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಕಲ್ಲೇಶ   ತಿಳಿಸಿದ್ದಾರೆ.
Please follow and like us:
error