ಹೊಸ ವಸತಿ ನಿಲಯ ದಾಖಲಾತಿಗಾಗಿ ಅರ್ಜಿ ಆಹ್ವಾನ.

ಕೊಪ್ಪಳ, ಜು.17 ಕುಷ್ಟಗಿ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯು
ತಾಲೂಕಿನ ತಾವರಗೇರಾ ಗ್ರಾಮದಲ್ಲಿ ಹೊಸದಾಗಿ ಮಂಜೂರಾಗಿರುವ 100 ಸಂಖ್ಯಾ ಬಲದ ಪರಿಶಿಷ್ಟ
ಜಾತಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಪರಿಶಿಷ್ಟ ಜಾತಿ ಮತ್ತು
ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ
ಸಲ್ಲಿಸಲಿಚ್ಛಿಸುವವರು ಭಾರತ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಹರಿರುವ ಪ.ಜಾತಿ
ಮತ್ತು ಪ.ಪಂಗಡಕ್ಕೆ ಸೇರಿದವರಾಗಿರಬೇಕು. ಸಮಾಜ ಕಲ್ಯಾಣ ಇಲಾಖೆಯ ಎಸ್.ಎಸ್.ಎಲ್.ಸಿ ಯಲ್ಲಿನ
ವಿದ್ಯಾರ್ಥಿ ವೇತನದ ನೊಂದಣಿ ಸಂಖ್ಯೆಯನ್ನು ಹೊಂದಿರಬೇಕು. ಯಾವುದಾದರೂ ರಾಷ್ಟ್ರೀಕೃತ
ಬ್ಯಾಂಕೊಂದರಲ್ಲಿ ಖಾತೆಯನ್ನು ಹೊಂದಿರಬೇಕು. ಸ್ಥಳೀಯರಾಗಿರದೇ, 10 ಕಿ.ಮೀ ಅಂತರದಿಂದ
ಕಾಲೇಜುಗಳಿಗೆ ಬರುತ್ತಿರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ
ಪ್ರಥಮ ಆದ್ಯತೆ ನೀಡಲಾಗುವುದು.
ಅರ್ಜಿ ನಮೂನೆಯನ್ನು ಸಂಬಂಧಪಟ್ಟ ವಿದ್ಯಾರ್ಥಿ
ನಿಲಯಗಳಲ್ಲಿ ಮತ್ತು ಕುಷ್ಟಗಿ ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ
ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
ವಿದ್ಯಾರ್ಹತೆಯ ಅಂಕಪಟ್ಟಿ, ವಾಸಸ್ಥಳ ಪ್ರಮಾಣ ಪತ್ರ, ಇತ್ತೀಚಿನ ಎರಡು ಭಾವಚಿತ್ರ,
ವಿದ್ಯಾರ್ಥಿ ವೇತನದ ಐ.ಡಿ ಸಂಖ್ಯೆ, ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ಝರಾಕ್ಸ್ ಪ್ರತಿ,
ಆಧಾರ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿಯ ನಕಲು ಪ್ರತಿಗಳನ್ನು ಲಗತ್ತಿಸಿ, ಜು.30
ರೊಳಗಾಗಿ ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಕುಷ್ಟಗಿ, ದೂರವಾಣಿ ಸಂಖ್ಯೆ
08536-267462 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.

Leave a Reply