ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ : ಆ.೨೬ ರಂದು ಮುಖ್ಯ ಶಿಕ್ಷಕರ ಸಭೆ

 : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಸಾಲಿಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಸಂಬಂಧ ಶಾಲೆಗಳಲ್ಲಿ ಹಮ್ಮಿಕೊಂಡಿರುವ ಯೋಜನೆಗಳು ಹಾಗೂ ಕಾರ್ಯ ಚಟುವಟಿಕೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯನ್ನು ಆ.೨೬ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ಗಂಗಾವತಿಯ ಲಯನ್ಸ್ ಕ್ಲಬ್ ಆವರಣದ ಆಯ್.ಎಂ.ಎ. ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ಗುಲಬರ್ಗಾ ಇವರು ವಹಿಸಲಿದ್ದಾರೆ. ಸಭೆಗೆ ಆಯಾ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು ನಮೂನೆ-೧,೨,೩ ರ ಮಾಹಿತಿಯೊಂದಿಗೆ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು, ಯಾವುದೇ ಕಾರಣಕ್ಕೂ ಪ್ರತಿನಿಧಿಗಳಿಗೆ ಸಭೆಗೆ ಹಾಜರಾಗಲು ಅವಕಾಶವಿರುವುದಿಲ್ಲ. ಗೈರುಹಾಜರಾಗುವ ಮುಖ್ಯೋಪಾಧ್ಯಾಯರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ  ಎಚ್ಚರಿಕೆ ನೀಡಿದ್ದಾರೆ.

Leave a Reply