ಅ.೦೧ ರಂದು ಕೊಪ್ಪಳದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ.

ಕೊಪ್ಪಳ,
ಸೆ.೨೯ (ಕ ವಾ)ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು
ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ
ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವಾ ನಿರತ ವಿವಿಧ ಸಂಘ ಸಂಸ್ಥೆಗಳ
ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾಯಕ್ರಮ ಅ.೦೧ ರಂದು
ಬೆಳಿಗ್ಗೆ ೧೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ. 
     ಸಣ್ಣ
ನೀರಾವರಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮ
ಉದ್ಘಾಟಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ
ವಹಿಸುವರು. ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ,
ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರು, ಜಿಲ್ಲಾ
ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದರ
ಖಾದ್ರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ
ಬಸಮ್ಮ ಹಳ್ಳಿಗುಡಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು ಚಂದುಸಾಬ್, ಜಿಲ್ಲಾ ಪಂಚಾಯತ್
ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಅರವಿಂದಗೌಡ ಪಾಟೀಲ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ
ಸಮಿತಿ ಅಧ್ಯಕ್ಷ ಪರಸಪ್ಪ ಕತ್ತಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ
ವಿರೇಶಪ್ಪ ಸಾಲೋಣಿ, ಪ್ರಭಾರಿ ಜಿಲ್ಲಾಧಿಕಾರಿ ಡಾ||ಪ್ರವೀಣ ಕುಮಾರ, ಜಿಲ್ಲಾ ಪಂಚಾಯತ್
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಡಾ||ತ್ಯಾಗರಾಜನ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ
ನ್ಯಾಯವಾದಿಗಳಾದ ವ್ಹಿ.ಎಮ್. ಭೂಸನೂರಮಠ, ಎಸ್.ರುದ್ರಯ್ಯ ಅವರು ಅತಿಥಿ ಉಪನ್ಯಾಸ
ನೀಡಲಿದ್ದಾರೆ ಎಂದು ತಿಳಿಸಿದೆ.
ಉಪ್ಪಾರ ಸಮುದಾಯದವರಿಗೆ ಸಹಾಯಧನ ಸೌಲಭ್ಯ ಅರ್ಜಿ ಆಹ್ವಾನ.
ಕೊಪ್ಪಳ,
ಸೆ.೨೯ (ಕ ವಾ) ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ,
ಕೊಪ್ಪಳ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಉಪ್ಪಾರ ಸಮುದಾಯವು
ತೊಡಗಿಸಿಕೊಂಡಿರುವ ಸಾಂಪ್ರದಾಯಿಕ ವೃತ್ತಿಯಲ್ಲಿ ಕೌಶಲ್ಯಾಭಿವೃದ್ಧಿ ಹೊಂದಲು ಹಾಗೂ ಇತರೆ
ವೃತ್ತಿ ಮತ್ತು ಉದ್ಯೋಗ ಕೈಗೊಳ್ಳಲು ಸಾಲ ಮತ್ತು ಸಹಾಯಧನ ನೀಡಲಾಗುತ್ತಿದ್ದು, ಅರ್ಜಿ
ಆಹ್ವಾನಿಸಲಾಗಿದೆ.
     ಅರ್ಜಿ ಸಲ್ಲಿಸಲಿಚ್ಛಿಸುವವರು ಹಿಂದುಳಿದ ವರ್ಗಗಳ
ಪ್ರವರ್ಗ-೧ ರಲ್ಲಿ ಬರುವ ಉಪ್ಪಾರ ಹಾಗೂ ಅದರ ಉಪ ಜಾತಿಗಳಿಗೆ ಸೇರಿದವರಾಗಿರಬೇಕು.
ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ.೪೦,೦೦೦, ಮತ್ತು ನಗರ
ಪ್ರದೇಶದವರಿಗೆ ರೂ.೫೫,೦೦೦ ಗಳ ಮಿತಿಯೊಳಗಿರಬೇಕು. ಅಭ್ಯರ್ಥಿಗಳು ೧೮ ರಿಂದ ೫೫
ವರ್ಷದೊಳಗಿನ ವಯೋಮಿತಿಯಲ್ಲಿರಬೇಕು. ಅರ್ಜಿದಾರರು ಕೈಗೊಳ್ಳುವ ವೃತ್ತಿಗೆ ಅನುಗುಣವಾಗಿ
ಗರಿಷ್ಠ ೫೦,೦೦೦.ರೂ.ಗಳ ಸೌಲಭ್ಯ ಒದಗಿಸಲಾಗುವುದು. ಇದರಲ್ಲಿ ಶೇ. ೩೦ ರಷ್ಟು ಗರಿಷ್ಠ
೧೦,೦೦೦ ರೂ.ಗಳವರೆಗೆ ಸಹಾಯಧನ ಹಾಗೂ ಉಳಿಕೆ ೪೦,೦೦೦ ರೂ.ಗಳವರೆಗೆ ವಾರ್ಷಿಕ ಶೇ.೪ ರ
ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು.   
     ಆಸಕ್ತರು ನಿಗಮದ ಜಿಲ್ಲಾ
ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ,
ಜಿಲ್ಲಾಡಳಿತ ಭವನ, ಕೊಪ್ಪಳ ಕಛೇರಿಯಲ್ಲಿ ಚೈತನ್ಯ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯ
ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು, ಭರ್ತಿ ಮಾಡಿ, ಅಕ್ಟೋಬರ್.೨೪ ರೊಳಗಾಗಿ ಅಗತ್ಯ
ದಾಖಲೆಗಳೊಂದಿಗೆ ಮರಳಿ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಿಗಮದ
ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ ಅಥವಾ ನಿಗಮದ
ವೆಬ್‌ಸೈಟ್
www.karnataka.gov.in/dbcdcನ್ನು 
ವೀಕ್ಷಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.  

ಅ.೦೨ ರಂದು ಕಡ್ಡಾಯವಾಗಿ ಗ್ರಾಮ ಸಭೆ ನಡೆಸಲು ಸೂಚನೆ.
ಕೊಪ್ಪಳ,
ಸೆ.೨೯ (ಕ ವಾ) ಗಂಗಾವತಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅಕ್ಟೋಬರ್.೦೨ ರಂದು
ಗ್ರಾಮ ಸಭೆಯನ್ನು ಕಡ್ಡಾಯವಾಗಿ ನಡೆಸುವಂತೆ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ
ಎಸ್.ಎನ್. ಮಠ ಅವರು ಸೂಚನೆ ನೀಡಿದ್ದಾರೆ.
     ಕೇಂದ್ರ ಸರ್ಕಾರವು ರಾಜ್ಯ
ಗ್ರಾಮೀಣಾಭಿವೃದ್ಧಿ ಯೋಜನೆಯನ್ನು ತಯಾರಿಸುವ ಸಲುವಾಗಿ ಅಕ್ಟೋಬರ್.೦೨ ರಂದು ಕಡ್ಡಾಯವಾಗಿ
ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆಯನ್ನು ನಡೆಸುವಂತೆ
ನಿರ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ
ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿಗಳು ಸಭೆಗೆ ಬೇಕಾದ ಪೂರ್ವ
ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು, ತಮ್ಮ ವ್ಯಾಪ್ತಿಯಲ್ಲಿ ಗ್ರಾಮ ಸಭೆಯನ್ನು
ಕಡ್ಡಾಯವಾಗಿ ನಡೆಸಬೇಕು.  ಎಲ್ಲ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು, ಯೋಜನೆಗೆ
ಸಂಬಂಧಿಸಿದ ಎಲ್ಲಾ ಬಾದ್ಯಸ್ಥರು, ಪಾಲುದಾರರು, ಗ್ರಾಮಸ್ಥರು ಈ ಗ್ರಾಮ ಸಭೆಯಲ್ಲಿ
ಭಾಗವಹಿಸಿ, ಯಶಸ್ವಿಗೊಳಿಸುವಂತೆ ಗಂಗಾವತಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ
ಅಧಿಕಾರಿಗಳು ತಿಳಿಸಿದ್ದಾರೆ. 

 

Please follow and like us:
error