You are here
Home > Koppal News > ಬಸವೇಶ್ವರರ ಜಯಂತಿ : ಸಡಗರ ಸಂಭ್ರಮದಿಂದ ಆಚರಣೆ

ಬಸವೇಶ್ವರರ ಜಯಂತಿ : ಸಡಗರ ಸಂಭ್ರಮದಿಂದ ಆಚರಣೆ

 ಮಹಾ ಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಕೊಪ್ಪಳದಲ್ಲಿ ಜಿಲ್ಲಾಡಳಿತ ಹಾಗೂ ಬಸವ ಜಯಂತ್ಯೋತ್ಸವ ಸಮಿತಿಯ ಸಂಯುಕ್ತ ಆಶ್ರಯದೊಂದಿಗೆ ಕೊಪ್ಪಳ ನಗರದ ಬಸವೇಶ್ವರ ವೃತ್ತದ ಬಳಿ ಜಗಜ್ಯೋತಿ ಬಸವೇಶ್ವರರ ಪೂಜಾ ಕಾರ್ಯಕ್ರಮ ಹಮ್ಮಿಕೊಂಡು ಸಡಗರ, ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. 
ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ  ಪುಷ್ಪ

ನಮನ ಸಲ್ಲಿಸಿದರು. ನಂತರ ಮಾಜಿ ಶಾಸಕ ಸಂಗಣ್ಣ ಕರಡಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಜಿ.ಪಂ.ಉಪಕಾರ್ಯದರ್ಶಿ ರವಿ ಬಸರಿಹಳ್ಳಿ, ನಗರಸಭೆ ಪೌರಾಯುಕ್ತೆ ಬಿ.ಎಂ.ಅಶ್ವಿನಿ, ಜಿ.ಪಂ.ಉಪಕಾರ್ಯದರ್ಶಿ ರವಿ ಬಿಸರಳ್ಳಿ, ಮಾಜಿ ಶಾಸಕರಾದ ಕೆ.ಬಸವರಾಜ ಹಿಟ್ನಾಳ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲಾ ಬಸವ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ಬಸವರಾಜ ಬಳ್ಳೊಳ್ಳಿ, ದಾನಪ್ಪ ಶೆಟ್ಟರ್, ರಾಜೇಶ್ ಶಶಿಮಠ, ಮಹೇಶ್ ಬೆಳವಣಕಿ, ನಾಗರಾಜ ಬಳ್ಳಾರಿ, ಶಿವಕುಮಾರ ಕುಕನೂರ ಮುಂತಾದ ಗಣ್ಯರು ಸೇರಿದಂತೆ ಎಲ್ಲ ಧರ್ಮದ ಮುಖಂಡರು, ಗಣ್ಯರು, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Top