ಅಮ್ಮ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಗುಲ್ಬರ್ಗ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ೧೧ನೇ ವರ್ಷದ `ಅಮ್ಮ ಪ್ರಶಸ್ತಿಗಾಗಿ ೨೦೧೦-೧೧ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ ಮಟ್ಟದ ಪ್ರತಿಷ್ಠಿತ ಅಮ್ಮ ಪ್ರಶಸ್ತಿಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ. ಕೃತಿಗಳನ್ನು ಸ್ವೀಕರಿಸಲು ನವೆಂಬರ್ ೫ ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮುನ್ನೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ರತ್ನಕಲಾ ಮುನ್ನೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ಮುನ್ನೂರ್ ಪ್ರತಿಷ್ಠಾನ ” ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಜಿ.ಕೆ.ಕ್ರಾಸ್,ಊಡಗಿ ರಸ್ತೆ, ಸೇಡಂ-೫೮೫ ೨೨೨. ಗುಲಬರ್ಗ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ ೯೪೪೯೯ ೮೫೬೯೫ ಮತ್ತು ೮೮೬೧೩ ೦೪೭೭೨ ಗೆ ಸಂಪರ್ಕಿಸಬಹುದು.
Please follow and like us:
error

Related posts

Leave a Comment