ಜಿಲ್ಲಾ ಪಂಚಾಯತಿ ಕೆ.ಡಿ.ಪಿ. ಸಭೆ ಮುಂದೂಡಿಕೆ

ಕೊಪ್ಪಳ ಸೆ. ೧೦ (ಕ ವಾ) ಇದೇ ಸೆ. ೧೧ ರಂದು ನಡೆಸಲು ಉದ್ದೇಶಿಸಲಾಗಿದ್ದ ಕೊಪ್ಪಳ ಜಿಲ್ಲಾ ಪಂಚಾಯತಿ ಕೆ.ಡಿ.ಪಿ. ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಮುಂದೂಡಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ತಿಳಿಸಿದ್ದಾರೆ.
ದೈಹಿಕ ಶಿಕ್ಷಣ ಶಿಕ್ಷಕರ ಜ್ಯೇಷ್ಠತಾ ಪಟ್ಟಿ ಪ್ರಕಟ.
ಕೊಪ್ಪಳ, ಸೆ.೧೦ (ಕ ವಾ) ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಜ್ಯೇಷ್ಠತಾ ಪಟ್ಟಿಯನ್ನು ಇಲಾಖಾ ಅಂತರ್ಜಾಲ ತಾಣದಲ್ಲಿ ಹಾಗೂ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಪ್ರಕಟಿಸಲಾಗಿದೆ.
     ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಗ್ರೇಡ್-೧ ಶಿಕ್ಷಕರ ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿಯನ್ನು ಇಲಾಖಾ ಅಂತರ್ಜಾಲ ತಾಣ

SCHOOL EDUCATION ನಲ್ಲಿ ಮತ್ತು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗಳಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಸೇರ್ಪಡೆ ಮತ್ತು ತಿದ್ದುಪಡಿ ಮಾಡುವ ಕುರಿತು ಆಕ್ಷೇಪಣೆಗಳಿದ್ದಲ್ಲಿ ಅಂತಹ ಶಿಕ್ಷಕರ ಮಾಹಿತಿಯನ್ನು ಶಾಲಾವಾರು ಭರ್ತಿಮಾಡಿ, ಸಂಬಂಧಿಸಿದ ಕಛೇರಿ ಮುಖ್ಯಸ್ಥರು ಸೇವಾ ಪುಸ್ತಕವನ್ನು ಪರಿಶೀಲಿಸಿ, ದೃಢೀಕರಣದೊಂದಿಗೆ ಸೆ.೨೫ ರೊಳಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ, ಕೊಪ್ಪಳ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ತಿಳಿಸಿದೆ.

ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಯೋಜನೆ  ಅರ್ಜಿ ಆಹ್ವಾನ.
ಕೊಪ್ಪಳ, ಸೆ.೧೦ (ಕ ವಾ) ಕೊಪ್ಪಳ ನಗರಸಭೆ ವತಿಯಿಂದ ನಗರ ವ್ಯಾಪ್ತಿಯಲ್ಲಿ ಬರುವ ಆರ್ಥಿಕವಾಗಿ ಹಿಂದುಳಿದ ಮತ್ತು ಕಡಿಮೆ ಆದಾಯ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರದ ರಾಜೀವ್ ರಿನ್ ಯೋಜನೆಯನ್ನು ಪರಿಷ್ಕರಿಸಿ, ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
     ಈ ಯೋಜನೆಯಡಿ ಕುಟುಂಬದ ವಾರ್ಷಿಕ ಆದಾಯ ರೂ.೩ ಲಕ್ಷಗಳಿಗಿಂತ ಕಡಿಮೆ ಇರುವ ಫಲಾನುಭವಿಗಳಿಗೆ ಹೊಸ ಮನೆ ನಿರ್ಮಿಸಲು ಅಥವಾ ಹಳೇ ಮನೆ ತೆರವುಗೊಳಿಸಿ ಹೊಸದಾಗಿ ಮನೆ ನಿರ್ಮಿಸಿಕೊಳ್ಳಲು ಅಥವಾ ಇರುವ ಮನೆಯನ್ನು ವಿಸ್ತರಿಸಿಕೊಳ್ಳಲು ಬ್ಯಾಂಕ್‌ಗಳಿಂದ ೬ ಲಕ್ಷ ರೂ.ಗಳ ವರೆಗೆ ಶೇಕಡಾ ೬.೫ ರ ಬಡ್ಡಿ ಸಹಾಯಧನದೊಂದಿಗೆ ಸಾಲ ಪಡೆಯಲು ಅವಕಾಶವಿರುತ್ತದೆ.  ಅರ್ಜಿ ಸಲ್ಲಿಸಲಿಚ್ಛಿಸುವವರು ನಿಗದಿತ ಅರ್ಜಿಯೊಂದಿಗೆ ಆದಾಯ, ವಾಸಸ್ಥಳ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ, ಆಧಾರ ಕಾರ್ಡ್, ನಿವೇಶನ ಹಕ್ಕುಪತ್ರ, ಫಾರಂ ನಂ.೩, ನೊಂದಾಯಿತ ಸಿವಿಲ್ ಇಂಜನಿಯರಿಂದ ಮನೆ ನಿರ್ಮಾಣದ ಅಂದಾಜು ಪತ್ರ, ಮನೆ ನಿರ್ಮಾಣ ಮಾಡಲು ಸಂಬಂಧಿಸಿದ ಇಲಾಖೆಯಿಂದ ಪರವಾನಿಗೆ ಪತ್ರ, ಇತ್ತೀಚಿನ ಭಾವಚಿತ್ರ ಸೇರಿದಂತೆ ಅವಶ್ಯಕ ದಾಖಲಾತಿಗಳೊಂದಿಗೆ ನಗರಸಭೆ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಾರ್ಯಾಲಯ ಕೊಪ್ಪಳ ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪೌರಾಯುಕ್ತ ರಮೇಶ್ ಪಟ್ಟೇದರ್ ತಿಳಿಸಿದ್ದಾರೆ.
ಸೆ.೧೨ ರಂದು ಕೊಪ್ಪಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ.
ಕೊಪ್ಪಳ, ಸೆ.೧೦ (ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ  ಕೊಪ್ಪಳ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಸೆ.೧೨ ರಂದು ಬೆಳಿಗ್ಗೆ ೧೦.೩೦ ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.
     ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಸಣ್ಣ ನೀರಾವರಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ ಮೆರವಣಿಗೆಗೆ ಚಾಲನೆ ನೀಡುವರು. ಸಂಸದ ಸಂಗಣ್ಣ ಕರಡಿ, ಡಾ|| ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸುವರು. ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಹಾಲಪ್ಪ ಆಚಾರ್, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಮಿತಿ ಅಧ್ಯಕ್ಷ ವಿರೇಶ ನಾಗಪ್ಪ ಸಾಲೋಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದರ ಖಾದ್ರಿ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು ಚಂದುಸಾಬ್, ಉಪಾಧ್ಯಕ್ಷ ಬಾಳಪ್ಪ ಬೂದಗುಂಪಿ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಭಾಗವಹಿಸುವರು.
     ವೇದಿಕೆ ಕಾರ್ಯಕ್ರಮದ ಬಳಿಕ ಅಂದು ಮಧ್ಯಾಹ್ನ ೦೩ ಗಂಟೆಗೆ ಶಿಕ್ಷಕರ ಕಲಾ ಸಂಘ, ಕೊಪ್ಪಳ ಇವರಿಂದ ಗಂಡುಗಲಿ ಕುಮಾರರಾಮ ನಾಟಕ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಗ್ಗೆ ೮.೩೦ ಗಂಟೆಗೆ ನಗರದ ಸಾರ್ವಜನಿಕ ಮೈದಾನದಿಂದ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆ ಆರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕಿನ ಎಲ್ಲಾ ಶಿಕ್ಷಕರು ಭಾಗವಹಿಸುವಂತೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಪೂಜಾರ್ ಕೋರಿದ್ದಾರೆ.  

Please follow and like us:
error