ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗೆ ರಾಜ್ಯ ಪ್ರಶಸ್ತಿ

ಕೊಪ್ಪಳ ಮೇ.   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡುವ ಸಲುವಾಗಿ ಅರ್ಹರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಿದೆ.
  ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ೨ ವ್ಯಕ್ತಿಗಳಿಗೆ ತಲಾ ೨೫೦೦೦ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ೨ ಸಂಸ್ಥೆಗಳಿಗೆ ತಲಾ ೧ ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಪ್ರದಾನ ಮಾಡಲಾಗುವುದು.  ೨೦೧೨ ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಗೆ ಮೇ. ೩೧ ರ ಒಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Please follow and like us:
error