ಬಿಸಿಯೂಟ ನೌಕರರ ಪ್ರತಿಭಟನೆ

ಬಿಸಿಯೂಟ ನೌಕರರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಬೇಕು ಮತ್ತು ಸೇವಾ ಭದ್ರತೆ ಒದಗಿಸಬೇಕು ಮುಂತಾದ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬಿಸಿಯೂಟ ತಯಾರಕರ ಒಕ್ಕೂಟ, ಎಐಟಿಯುಸಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕ ಪಂಚಾಯತಿ ಮುಂದೆ ಧರಣಿ ನಡೆಸಲಾಯಿತು. ನಗರದ ರೈಲ್ವೆ ನಿಲ್ದಾಣದಿಂದ ಮೆರವಣಿಗೆಯಲ್ಲಿ ಆಗಮಿಸಿದ ನೌಕರರು ತಮ್ಮ ಬೇಡಿಕೆಗನ್ನು ಈಡೇರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಎಐಟಿಯುಸಿ ಸಂಚಾಲಕ ಬಸವರಾಜ ಶೀಲವಂತರ, ಪುಷ್ಪಾ ಮೇಸ್ತ್ರೀ, ಕಮಲಾದೇವಿ ದೊಡ್ಡಮಿ, ಗಾಳೆಪ್ಪ ಮುಂಗೋಲಿ, ಎಸ್.ಎ.ಗಫಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

Please follow and like us:
error