ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮ

ಕೊಪ್ಪಳ ಜ.೦೯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜ.೧೧ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ಸ್ವಾಮಿ ವಿವೇಕಾನಂದರ ೧೫೦ನೇ ಜನ್ಮ ದಿನಾಚರಣೆ ಅಂಗವಾಗಿ ಶಿಬಿರದ ಮತ್ತು ಯುವ ಸಮಾವೇಶದ ಉದ್ಘಾಟನೆ ಸಮಾರಂಭ ಹಾಗೂ ಯುವ ಜಾಥಾ, ಸಾರ್ವಜನಿಕ ಮೈದಾನದಿಂದ ಜರುಗಲಿದೆ.
ದಿವ್ಯ ಸಾನಿಧ್ಯವನ್ನು ಕೊಪ್ಪಳದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ  ಚೈತನ್ಯಾನಂದ ಸ್ವಾಮಿಗಳು ಅವರು ವಹಿಸುವರು. ಉದ್ಘಾಟನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿ ಹಾಗೂ ಸಂಸದ ಶಿವರಾಮಗೌಡ ಅವರು ನೆರವೇರಿಸಲಿದ್ದಾರೆ. 
ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ  ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಶಾಸಕರಾದ ಪರಣ್ಣ ಮುನವಳ್ಳಿ, ಅಮರೇಗೌಡ ಪಾಟೀಲ್ ಬಯ್ಯಾಪುರ, ಶಿವರಾಜ ತಂಗಡಗಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶಶೀಲ್ ಜಿ.ನಮೋಶಿ,  ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ ಅವರು ಪಾಲ್ಗೊಳ್ಳುವರು ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಎನ್.ಘಾಡಿ   ತಿಳಿಸಿದ್ದಾರೆ.
Please follow and like us:

Leave a Reply