ಶಿಕ್ಷಕರ ವರ್ಗಾವಣೆ ಆದ್ಯತೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಜೂ.೨೧ ಕೊನೆಯ ದಿನ

  ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಸಾಲಿನ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಆದ್ಯತೆ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಪ್ರಕಟಿಸಲಾಗಿದ್ದು, ಯಾವುದೇ ಆಕ್ಷೇಪಣೆಗಳಿಗೆ ಜೂ.೨೧ ಕೊನೆಯ ದಿನವಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಸಂಬಂಧಿಸಿದ ಶಿಕ್ಷಕರು ಈ ಆದ್ಯತೆ ಪಟ್ಟಿಯನ್ನು ಪರಿಶೀಲಿಸಿ ತಮ್ಮ ಸೇವಾವಿವರ, ವೇಟೇಜ್, ಜನ್ಮದಿನಾಂಕ, ವರ್ಗಾವಣೆ ಬಯಸಿರುವ ಆದ್ಯತೆ, ವರ್ಗಾವಣೆ ಬಯಸಿರುವ ತಾಲೂಕು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಹಾಗೂ ತಿದ್ದುಪಡಿಗಳಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಜೂ.೨೧ ರೊಳಗಾಗಿ ಸಂಬಂಧಿಸಿದ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಬರುವ ಆಕ್ಷೇಪನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ. 
Please follow and like us:
error