ಮಾ. ೧೫ ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ

  : ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ, ಕಾನೂನು ಮಾಪನಶಾಸ್ತ್ರ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಕಾನೂನು ಮಹಾವಿದ್ಯಾಲಯ ಹಾಗೂ ಶಿಕ್ಷಣ ಮಹಾವಿದ್ಯಾಲಯ ಮತ್ತು ಭವಾನಿ ಮಹಿಳಾ ಸೇವಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಮಾ. ೧೫ ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಸಮಾರಂಭ ಕೊಪ್ಪಳದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆಯಲಿದೆ.
  ಈ ಬಾರಿಯ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆಗೆ ನಮ್ಮ ಹಣ ನಮ್ಮ ಹಕ್ಕುಗಳು: ಆರ್ಥಿಕ ಸೇವೆಗಳಲ್ಲಿ ವಾಸ್ತವಿಕ ಆಯ್ಕೆಗಾಗಿ ಆಂದೋಲನ ಎಂಬ ಘೋಷವಾಕ್ಯವನ್ನು ಸರ್ಕಾರ ಪ್ರಕಟಿಸಿದೆ.  ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು,  ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಕಾನೂನು ಮಹಾವಿದ್ಯಾಲಯ ಹಾಗೂ ಶಿಕ್ಷಣ ಮಹಾವಿದ್ಯಾಲಯದ ಸಂಯೋಜಕ ಡಾ. ಕೆ.ಬಿ. ಬ್ಯಾಳಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಸದಸ್ಯರುಗಳಾದ ಬಿ. ಶಿವರೆಡ್ಡಿಗೌಡ ಮತ್ತು ವೇದಾ ಜೋಷಿ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಎನ್.ಬಿ. ಮಾರನಬಸರಿ ಅವರು ಗ್ರಾಹಕರ ಜಾಗೃತಿ ಸಂದೇಶ ನೀಡುವರು.  ವಕೀಲ ರಾಘವೇಂದ್ರ ಪಾನಘಂಟಿ ಅವರು ಈ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡುವರು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಅಶೋಕ್ ಕಲಘಟಗಿ ಅವರು ತಿಳಿಸಿದ್ದಾರೆ.

Leave a Reply