ಸತತ ಮಳೆ- ತುರ್ತು ಸಂದರ್ಭ ನಿರ್ವಹಣೆಗೆ ಸಹಾಯವಾಣಿ ಪ್ರಾರಂಭ

  ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ಯಾವುದೇ ಅನಾಹುತ, ತೊಂದರೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
  ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಸಹಾಯವಾಣಿಯ ದೂರವಾಣಿ ಸಂಖ್ಯೆ: ೦೮೫೩೯-೨೨೧೬೯೦ ಆಗಿದ್ದು, ಸತತ ಮಳೆಯಿಂದ ಯಾವುದೇ ತೊಂದರೆ ಕಂಡುಬಂದಲ್ಲಿ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.  ಅಗತ್ಯ ಬಿದ್ದಲ್ಲಿ ಆಯಾ ತಾಲೂಕು ಕಚೇರಿಗಳಲ್ಲಿಯೂ ಸಹಾಯವಾಣಿ ಪ್ರಾರಂಭಕ್ಕೆ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
Please follow and like us:
error