ಭೂ ಒಡೆತನ ಯೋಜನೆ : ಅವಧಿ ವಿಸ್ತರಣೆ

 ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅರ್ಹ ಅಲ್ಪಸಂಖ್ಯಾತರಿಗಾಗಿ ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾತಿಗೆ ಅಲ್ಪಸಂಖ್ಯಾತ ಭೂ ರಹಿತ ಕೃಷಿ ಕಾರ್ಮಿಕರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ.೩೧ ರವರೆಗೆ ವಿಸ್ತರಿಸಲಾಗಿದೆ ಎಂದು  ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾತಿಗೆ ಅಲ್ಪಸಂಖ್ಯಾತ ಭೂ-ರಹಿತ ಕೃಷಿ ಕಾರ್ಮಿಕರಿಂದ ಕಳದ ಮಾರ್ಚ್ ತಿಂಗಳಿನಲ್ಲಿ ಅರ್ಜಿ ಆಹ್ವಾನಿಸಿ, ಅರ್ಜಿ ಸಲ್ಲಿಕೆಗೆ ಮಾ. ೩೧ ಕೊನೆಯ ದಿನಾಂಕವನ್ನಾಗಿ ನಿಗದಿಪಡಿಸಲಾಗಿತ್ತು.  ಆದರೆ ಲೋಕಸಭಾ ಚುನಾವಣೆಯ ನಿಮಿತ್ಯ ಚುನಾವಣಾ ನೀತಿ ಸಂಹಿತೆ ಜಾರಿಯಾದ ಪ್ರಯುಕ್ತ ಅರ್ಜಿ ವಿತರಿಸುವ ಮತ್ತು  ಸ್ವೀಕರಿಸುವ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತು, ಇದೀಗ ಚುನಾವಣೆ ನೀತಿ ಸಂಹಿತೆ ಸಡಿಲಿಕೆಗೊಂಡಿರುವುದರಿಂದ, ಈಗ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 
ಅರ್ಜಿಗಳನ್ನು ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಗೆ ಮೇ.೩೧ ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೫೩೯-೨೨೫೦೦೮  ಸಂಪರ್ಕಿಸಬಹುದಾಗಿದೆ  
Please follow and like us:
error