ಫೆ. ೨೨ ರಂದು ಕೊಪ್ಪಳದಲ್ಲಿ ಅಲ್ಪಸಂಖ್ಯಾತರಿಗೆ ಅರಿವು ಕಾರ್ಯಕ್ರಮ

ಕೊಪ್ಪಳ ಫೆ.  : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅಲ್ಪಸಂಖ್ಯಾತರಿಗಾಗಿ ಪ್ರಸಕ್ತ ಸಾಲಿಗೆ ಒದಗಿಸುವ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಫೆ. ೨೨ ರಂದು ಬೆ. ೧೦ ಗಂಟೆಗೆ ಕೊಪ್ಪಳ ನಗರದ ಎಲ್‌ಐಸಿ ಕಚೇರಿ ಹಿಂಭಾಗದಲ್ಲಿರುವ ವಾಲ್ಮೀಕಿ ಭವನದಲ್ಲಿ ಆಯೋಜಿಸಿದೆ.
        ನಿಗಮವು ಪ್ರಸಕ್ತ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಿಇಟಿ ಮೂಲಕ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಯೋಜನೆ ರೂಪಿಸಿದೆ.  ಯೋಜನೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಕೊಪ್ಪಳದಲ್ಲಿ ಹಮ್ಮಿಕೊಂಡಿದ್ದು, ನಿಗಮದ ಆಡಳಿತಾಧಿಕಾರಿಯಾಗಿರುವ ಸೈಯದ್ ವಜೀರ್ ಅಹ್ಮದ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ ಸಮುದಾಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಸಿಇಟಿ ಮೂಲಕ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಯಸುವವರು ಶೈಕ್ಷಣಿಕ ಸಾಲ ಸೌಲಭ್ಯವನ್ನು ಪಡೆಯಲು ಸಲ್ಲಿಸಬೇಕಾದ ನಿಗದಿತ ಅರ್ಜಿ ನಮೂನೆಗಳನ್ನು ಸಹ ಕಾರ್ಯಕ್ರಮ ಸಂದರ್ಭದಲ್ಲಿ ಪಡೆಯಬಹುದಾಗಿದೆ.  ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು, ಪೋಷಕರು, ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
Please follow and like us:
error