ಮಳೆಯಿಂದ ಬೆಳೆ ಹಾನಿ ವೀಕ್ಷಿಸಲು ಏ.೧೭ ರಂದು ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ

ಕಳೆದ ಏ. ೧೨ ಮತ್ತು ೧೩ ರಂದು ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಗೆ ಉಂಟಾಗಿರುವ ಬೆಳೆ ಹಾನಿಯನ್ನು ಖುದ್ದು ವೀಕ್ಷಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ. ೧೭ ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದಾರೆ.

  ಅಂದು ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಹೊರಟು, ಬೆ. ೧೦ ಗಂಟೆಗೆ ಗಿಣಿಗೇರಾ ಬಳಿಯ ಎಂಎಸ್‌ಪಿಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು.  ನಂತರ ಹೆಲಿಕಾಪ್ಟರ್ ಮೂಲಕ ಗಂಗಾವತಿ ತಾಲೂಕಿನಲ್ಲಿ ಮಳೆಯಿಂದಾಗಿ ಕೃಷಿ ಬೆಳೆ ಹಾನಿಯಾಗಿರುವ ಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸುವರು.  ಬೆ. ೧೧-೩೦ ಗಂಟೆಗೆ ಗಂಗಾವತಿಯ ಎಪಿಎಂಸಿ ಹೆಲಿಪ್ಯಾಡ್‌ಗೆ ಆಗಮಿಸುವರು. ತರುವಾಯ ಗಂಗಾವತಿ ತಾಲೂಕಿನಲ್ಲಿ ಮಳೆಯಿಂದಾಗಿ ಕೃಷಿ ಬೆಳೆ ಹಾನಿಯಾಗಿರುವ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.  ಮಧ್ಯಾಹ್ನ ೨ ಗಂಟೆಗೆ ಗಂಗಾವತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು ನಂತರ ಪತ್ರಿಕಾಗೋಷ್ಠಿ ನಡೆಸುವರು.  ಮಧ್ಯಾಹ್ನ ೨-೪೫ ಗಂಟೆಗೆ ಹೆಲಿಕಾಪ್ಟರ್ ಮೂಲಕ ಗಿಣಿಗೇರಾ ಬಳಿಯ ಎಂಎಸ್‌ಪಿಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು.  ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ ೩-೪೫ ಗಂಟೆಗೆ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

Related posts

Leave a Comment