ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿಯಂತಹ ವೇದಿಕೆಗಳ ಅವಶ್ಯವಿದೆ ನಾಗರಾಜ ಜುಮ್ಮನ್ನವರ.

ಕೊಪ್ಪಳ- ಮಕ್ಕಳಲ್ಲಿ  ಸೂಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿಯಂತಹ ವೇದಿಕೆಗಳ ಅವಶ್ಯವಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ನಾಗರಾಜ ಜುಮ್ಮನ್ನವರ ಹೇಳಿದರು.
ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾಳಿದಾಸ ಪ್ರೌಢ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಾಳಿದಾಸ ಪ್ರೌಢ ಶಾಲೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕೊಪ್ಪಳ ಪೂರ್ವ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಮಾತನಾಡುತ್ತ,ಪ್ರತಿಯೊಂದು ಮಗುವಿನಲ್ಲಿ ಒಂದಲ್ಲ ಒಂದು ರೀತಿಯ ಪ್ರತಿಭೆಗಳು ಅಡಗಿರುತ್ತವೆ.ಅಂತಹ ಪ್ರತಿಭೆಗಳು ಹೊರಬರಬೇಕಾದರೆ ಪ್ರತಿಭಾ ಕಾರಂಜಿಯಂತಹ ಅನೇಕ ಕಾರ್ಯಕ್ರಮಗಳ  ಅಗತ್ಯವಿದೆ.ಹಿಂದಿನ ಕಾಲದಲ್ಲಿ ಮಕ್ಕಳ ಪ್ರತಿಭೆಯನ್ನು ಗುರುತಿ ಅವುಗಳನ್ನು ಪ್ರದರ್ಶಿಸಲು ವೇದಿಕೆಗಳ ಸಾಕಷ್ಟು ಪ್ರಮಾಣದಲ್ಲಿ ಸಿಗುತ್ತಿರಲಿಲ್ಲ.ಆದರೆ ಇಂದು ಶಿಕ್ಷಣ ಇಲಾಖೆಯು ಶಿಕ್ಷಣದಲ್ಲಿ ಬದಲಾವಣೆಯನ್ನು ತರುವುದರ ಜೊತೆಯಲ್ಲಿ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಳಿದಾಸ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಹನುಮಂತಪ್ಪ ಅಂಗಡಿ ಮಾತನಾಡಿ,ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಕೇವಲ ವೇದಿಕೆಗಳು ಇದ್ದರಷ್ಟೇ ಸಾಲದು ವೇದಿಕೆಯ ಮೇಲೆ ಮಕ್ಕಳು ತಮ್ಮ ಸೂಪ್ತವಾದ ಪ್ರತಿಭೆಯನ್ನು ಪ್ರದರ್ಶಿಸಬೇಕಾದರೆ ಮೊದಲು ಶಿಕ್ಷಕರು ವಿಶೇಷ ಪ್ರತಿಭೆಯನ್ನು ಹೊಂದಿರುವ ಮಕ್ಕಳನ್ನು ಗುರುತಿಸು ಕಾರ್ಯ ಮಾಡಬೇಕು.ಅಲ್ಲದೆ ಯಾವುದೇ ಮಕ್ಕಳ ನಿರ್ಲಕ್ಷ ವಹಿಸದೇ ಎಲ್ಲಾ ಮಕ್ಕಳನ್ನು ಸಮಾನವಾದ ದೃಷ್ಠಿಯಿಂದ ಕಾಣಬೇಕು ಹಾಗೂ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಹೇಳಿದರು.ಕಾರ್ಯಕ್ರಮವನ್ನು  ನಗರಸಭೆಯ ಅಧ್ಯಕ್ಷರಾದ ಬಸಮ್ಮ ರಾಮಣ್ಣ ಹಳ್ಳಿಗುಡಿ ಉದ್ಘಾಟಿಸಿದರು.
ಪೂರ್ವ ಕ್ಲಸ್ಟರಿನ ಸಿ.ಆರ್.ಪಿ.ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಳಿದಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಗವಿಸಿದ್ದಪ್ಪ ಹಿಟ್ನಾಳ, ಕಾಳಿದಾಸ ಪ್ರೌಢ ಶಾಲೆಯ ಮುಖ್ಯೋಪಾದ್ಯರಾದ ಎಸ್.ಎಸ್.ಗುರುವಿನ್,ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ,ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ,ಕನಕ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಂಜುನಾಥ ಅಬ್ಬಿಗೇರಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥ,ತಾಲೂಕ ಉಪಾಧ್ಯಕ್ಷರಾದ ಪೂರ್ಣಿಮಾ ತುಪ್ಪದ,ಚಿತ್ರ ಕಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಹಾಂತೇಶ ಬಳಿಗಾರ,ಗವಿಸಿದ್ದಪ್ಪ ಪೂಜಾರ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಕಾಳಿದಾಸ ಪ್ರೌಢ ಶಾಲೆಯ ಶಿಕ್ಷಕರಾದ ಡಿ.ರಾಮಣ್ಣ ನಿರೂಪಿಸಿದರು. ಕಾಳಿದಾಸ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ನಾಗನಗೌಡ ಆರ್.ಸ್ವಾಗತಿಸಿ,ಶಿಕ್ಷಕರಾದ ಎಸ್.ಸಿ.ಗುಗಲೋತ್ತರ ವಂದಿಸಿದರು.

Please follow and like us:
error