ಪ್ರಗತಿ ಗ್ರಾಮೀಣ ಬ್ಯಾಂಕ್‌ನಿಂದ ಕನಕಗಿರಿಯಲ್ಲಿ ೫೦೦ ಸ್ವ-ಸಹಾಯ ಗುಂಪುಗಳಿಗೆ ಸಾಲ

ಕೊಪ್ಪಳ ಡಿ. ೧೯ : ಪ್ರಗತಿ ಗ್ರಾಮೀಣ ಬ್ಯಾಂಕ್‌ನಿಂದ ಸ್ವ-ಸಹಾಯ ಗುಂಪುಗಳಿಗೆ ಆರ್ಥಿಕ ಸಹಾಯಕ್ಕಾಗಿ ವಿಶೇಷ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಆಯ್ದ ಶಾಖೆಗಳಿಂದ ೫೦೦ ಸ್ವ-ಸಹಾಯ ಗುಂಪುಗಳಿಗೆ ಸಾಲ ವಿತರಣಾ ಸಮಾರಂಭ ಡಿ. ೨೧ ರಂದು ಬೆಳಿಗ್ಗೆ ೧೧-೩೦ ಗಂಟೆಗೆಗಂಗಾವತಿ ತಾಲೂಕು ಕನಕಗಿರಿಯ ಸಮೂಹ ಸಂಸ್ಥೆ ಆವರಣದಲ್ಲಿ ನಡೆಯಲಿದೆ.
  ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ನಿರ್ದೇಶಕಿ ಉಮಾಶಂಕರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.  ಕೆನರಾಬ್ಯಾಂಕ್‌ನ ಬೆಂಗಳೂರು ಕಾರ್ಯನಿರ್ವಾಹಕ ನಿರ್ದೇಶಕಿ ಅರ್ಚನಾ ಎಸ್. ಭಾರ್ಗವ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.  ನಬಾರ್ಡ್ ಪ್ರಾದೇಶಿಕ ಕಚೇರಿ ಬೆಂಗಳೂರಿನ ಮುಖ್ಯ ಮಹಾಪ್ರಬಂಧಕರಾದ ಎಸ್.ಎನ್.ಎ. ಜಿನ್ನಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸವರು ಎಂದು ಪ್ರಗತಿ ಗ್ರಾಮೀಣ ಬ್ಯಾಂಕ್ತಿ ಳಿಸಿದೆ.

Leave a Reply