ನಗರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ

ಕೊಪ್ಪಳ, ಏ.೨೨: ಇದೇ ದಿ.೨೩ ಸೋಮವಾರ ಸಂಜೆ ೫ ಗಂಟೆಗೆ ಕೊಪ್ಪಳ ನಗರಕ್ಕೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗಮಿಸಲಿದ್ದಾರೆ. 
ನಗರದ ಸಾರ್ವಜನಿಕ ಮೈದಾನದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರವರ ಪರಮತಯಾಚನೆ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ, ಸುರೇಶ ಭೂಮರೆಡ್ಡಿ,  ಪಕ್ಷದ ಜಿಲ್ಲಾಧ್ಯಕ್ಷ ಎಸ್.ಬಿ. ಖಾದ್ರಿ, ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷರುಗಳಾದ ಎಂ.ವಿ. ಪಾಟೀಲ್, ನಿಲಕಂಠಯ್ಯ ಹಿರೇಮಠ, ನಗರಸಭೆ ಮಾಜಿ ಸದಸ್ಯ ಈರಣ್ಣ ಹಂಚಿನಾಳ ಹಾಗೂ ಹಿರಿಯರಾದ ಹಲಗೇರಿ ಬಸವರಾಜಪ್ಪ, ತಾಲ್ಲೂಕಾಧ್ಯಕ್ಷ ಅಂದಪ್ಪ ಮರೇಬಾಳ, ಕಾರ್ಯದರ್ಶಿ ಶೇಖಪ್ಪ ಲಕ್ಷಾಣಿ, ಎಸ್. ಟಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ರಮೇಶ ವಣಬಳ್ಳಾರಿ, ಪಕ್ಷದ ಮುಖಂಡರಾದ ವಿರೇಶ್‌ಮಹಾಂತಯ್ಯನಮಠ್, ರಾಜು ಹಲಗೇರಿ, ಕೋಟ್ರಪ್ಪ ಕೋರ್ಲಳ್ಳಿ, ಎಂ.ಡಿ.ಹುಸೇನ ಮಾಸ್ಟರ್, ನಗರ ಸಭೆ ಸದಸ್ಯರಾದ ಚನ್ನಪ್ಪ ಕೋಟ್ಯಾಳ್, ಖಾಜಾವಲಿ ಬನ್ನಿಕೊಪ್ಪ, ಮಿನಾಕ್ಷಮ್ಮ, ನಗರ ಯುವ ಘಟಕದ ಅಧ್ಯಕ್ಷ ಸೈಯದ್ ಎಂ.ಹುಸೇನಿ, ಟಿ.ಟಿ. ಪಾಟೀಲ್, ಸಿದ್ದಾರಡ್ಡಿ ಡಂಬ್ರಳ್ಳಿ, ಇಸೂಫ್‌ಖಾನ್, ಹನುಮಂತಪ್ಪ ಹೀರೆಸಿಂದೋಗಿ, ರಮೇಶ ಹದ್ಲಿ, ಶಂಕರ ಗೆಜ್ಜಿ, ಮೊಜದಮ್, ದೇವೆಂದ್ರಪ್ಪ, ಭಾಗ್ಯನಗರದ ಮಂಜುನಾಥ ಶ್ಯಾವಿ, ಮಂಜುನಾಥ್ ಗಡ್ಡದ್, ವೆಂಕಟೇಶ ಬೆಲ್ಲದ್, ಅಮರೇಶ ಮುರುಳಿ, ವಿಜಯಕುಮಾರ ಬಿಸರಳ್ಳಿ, ಪ್ರಭು ಬಬ್ಲಿ, ರೋಫ್ ಕಿಲ್ಲೇದರ್, ಸುರೇಶಗೌಡ್ರ ಎನ್.,  ಸೇರಿದಂತೆ ಪಕ್ಷದ ಇತರ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿರುವರು.
Please follow and like us:
error