ಜು. ೩೧ಕ್ಕೆ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ

  ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಜು. ೩೧ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಸಂಸದ ಶಿವರಾಮಗೌಡ ಅವರು ವಹಿಸುವರು.  ಈ ಸಭೆಯನ್ನು ಆಗಸ್ಟ್ ೦೨ ರಂದು ನಡೆಸಲು ನಿಗದಿಪಡಿಸಲಾಗಿತ್ತು.  ಆದರೆ ಅನಿವಾರ್ಯ ಕಾರಣಗಳಿಂದ ಸಭೆಯನ್ನು ಜು. ೩೧ಕ್ಕೆ ನಡೆಸಲು ನಿಗದಿಪಡಿಸಲಾಗಿದೆ.  ಸಭೆಯಲ್ಲಿ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ   ತಿಳಿಸಿದ್ದಾರೆ.

Leave a Reply